ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಲೇಜು ಫೆಸ್ಟ್ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ, ಓರ್ವ ಕಾಲೇಜು ವಿದ್ಯಾರ್ಥಿ ಹತ್ಯೆಯಾಗಿರುವ ಘಟನೆ ಬಾಗಲೂರು ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ.
ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಕೊಲೆಯಾದ ದುರ್ದೈವಿ. ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದ ಭಾಸ್ಕರ್ ಹಾಗೂ ಮತ್ತೋರ್ವ ವಿದ್ಯಾರ್ಥಿ ಗುಂಪಿನ ನಡುವೆ ತಡರಾತ್ರಿ ಕಾಲೇಜು ಪೆಸ್ಟ್ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿದೆ. ಈ ವೇಳೆ ಎದುರಾಳಿ ಗುಂಪು ಭಾಸ್ಕರ್ಗೆ ಚಾಕುವಿನಿಂದ ಇರಿದಿದ್ದು, ಪರಿಣಾಮ ಆತ ಸಾವನ್ನಪ್ಪಿದ್ದಾನೆ.
ಕಾಲೇಜು ಸಿಸಿಟಿವಿ ಪರಿಶೀಲಿಸುತ್ತಿರುವ ಬಾಗಲೂರು ಠಾಣಾ ಪೊಲೀಸರು, ಪರಾರಿಯಾಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.