ಬಿಸಿಯೂಟದ ಸಾಂಬಾರ್ ಪಾತ್ರೆಗೆ‌ ಬಿದ್ದಿದ್ದ ವಿದ್ಯಾರ್ಥಿನಿ, ಚಿಕಿತ್ಸೆ ಫಲಿಸದೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಬಿಸಿಯೂಟದ ಸಾಂಬಾರ್‌ ಪಾತ್ರೆಯಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಮಹಾಂತಮ್ಮ (8) ಚಿಕಿತ್ಸೆ ಫಲಿಸದೆ ಮೃತಪಟ್ಟ ವಿದ್ಯಾರ್ಥಿನಿ.

ನವೆಂಬರ್‌ 16ರಂದು ಅಫಜಲಪುರ ತಾಲೂಕಿನ ಚಿಣಮಗೇರಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಬಡಿಸುವ ವೇಳೆ ಸಾಂಬಾರ್‌ ಪಾತ್ರೆಗೆ ಮಹಾಂತಮ್ಮ ಬಿದ್ದಿದ್ದಳು. ಗಂಭೀರವಾಗಿ ಗಾಯಗೊಂಡಿದ್ದ ಆಕೆಗೆ ಕಲಬುರಗಿಯ ಬಸವೇಶ್ವರ ಆಸ್ಪತ್ರೆಯಲ್ಲಿ ಮೊದಲು ಚಿಕಿತ್ಸೆ ನೀಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೆ ಶಾಲೆಯ ಮುಖ್ಯ ಶಿಕ್ಷಕ ಮತ್ತು ಸಹ ಶಿಕ್ಷಕ, ಅಡುಗೆ ಪ್ರಮುಖರನ್ನು ಅಮಾನತು ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!