ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾನಿಲಯದ ಹಾಸ್ಟೆಲ್‌ನ 16ನೇ ಫ್ಲೋರ್‌ನಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾರೆ.
ಅಂತಿಮ ವರ್ಷದ ಬಿಎಸ್‌ಸಿ ವಿದ್ಯಾರ್ಥಿ ಅಶ್ವಿನ್ ನಂಬಿಯಾರ್ ವಿವಿ ಹಾಸ್ಟೆಲ್‌ನ 16ನೇ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ.
ಅಶ್ವಿನ್ ಪೋಷಕರು ಅತೀವ ದುಃಖದಲ್ಲಿದ್ದು, ಮಗ ಆತ್ಮಹತ್ಯೆ ಮಾಡಿಕೊಳ್ಳುವಂತವನಲ್ಲ ಎಂದು ಹೇಳುತ್ತಿದ್ದಾರೆ. ಹಾಸ್ಟೆಲ್ ರೂಮ್‌ನಲ್ಲಿ ಯಾವುದೇ ಡೆತ್‌ನೋಟ್ ಪತ್ತೆಯಾಗಿಲ್ಲ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮರಣೋತ್ತರ ಪರೀಕ್ಷೆ ನಂತರ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯುತ್ತದೆ ಎಂದಿದ್ದಾರೆ. ಅಶ್ವಿನ್ ಸ್ನೇಹಿತರು, ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ಅಶ್ವಿನ್ ಸಾವಿಗೆ ಸಂತಾಪ ಸೂಚಿಸಿದೆ.