ಹೊಸದಿಗಂತ ವರದಿ ಚಿತ್ರದುರ್ಗ
ವಿದ್ಯಾರ್ಥಿನಿಯೋರ್ವಳು ಕಾಲೇಜು ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದಲ್ಲಿ ಶುಕ್ರವಾರ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಪ್ರಥಮ ಬಿಎಸ್ಸಿ ವಿದ್ಯಾರ್ಥಿನಿ ಪ್ರೇಮಾ ಎಂದು ಗುರುತಿಸಲಾಗಿದೆ.
ಮೆದೇಹಳ್ಳಿ ನಿವಾಸಿ ಸುದಾಕರ್ ಎಂಬುವರ ಮಗಳು ಪ್ರೇಮಾ ಬೆಳಿಗ್ಗೆ ಮನೆಯಿಂದ ಹೊರಟು ಕಾಲೇಜಿಗೆ ಬಂದಿದ್ದಳು. ಬಳಿಕ ಈ ಅನಾಹುತ ಸಂಭವಿಸಿದೆ. ಚಿತ್ರಡಾನ್ ಬಾಸ್ಕೋ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು.
ಈಕೆ ಕಾಲೇಜಿನ ಮೂರನೇ ಮಹಡಿಯಿಂದ ಜಿಗಿದಿದ್ದಾಳೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಬಸವೇಶ್ವರ ಆಸ್ಪತ್ತೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನಾ ಸ್ಥಳಕ್ಕೆ ಹೆಚ್ಚಿವರಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕುಮಾರಸ್ವಾಮಿ, ಬಡಾವಣೆ ಪೊಲೀಸ್ ಠಾಣೆ ಪಿ.ಎಸ್.ಐ. ರಘು ಭೇಟಿ ನೀಡಿ ಪರಿಶೀಲಿಸಿದ್ದಾರೆ.