SHOCKING | ವಸತಿ ಶಾಲೆಯ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ದುರ್ಮ*ರಣ
ಹೊಸದಿಗಂತ ಡಿಜಿಟಲ್ ಡೆಸ್ಕ್: ಚಿತ್ರದುರ್ಗದ ವಸತಿ ಶಾಲೆಯೊಂದರಲ್ಲಿ ಹತ್ತನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಭರಮಸಾಗರದ ಖಾಸಗಿ ವಸತಿ ಶಾಲೆಯ ವಿದ್ಯಾರ್ಥಿ ಕೊಟ್ರೇಶ್ ಮೂರನೇ ಮಹಡಿಯಿಂದ ನೆಲಕ್ಕೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿ ಮೂಲದವನಾಗಿದ್ದು, ಈವರೆಗೆ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಟ್ರೇಶ್ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಭರಮಸಾಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.
Copy and paste this URL into your WordPress site to embed
Copy and paste this code into your site to embed