ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆಯ ವಸತಿ ಶಾಲೆಯೊಂದರಲ್ಲಿ ಬಾಯ್ಲರ್ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಸತಿ ಶಾಲೆಯ ಮುಖ್ಯೋಪಾಧ್ಯಾಯ ಹಾಗೂ ವಾರ್ಡನ್‌ನನ್ನು ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ನಗರದ ಮಂಜುನಾಥಸ್ವಾಮಿ ಪರಿಶಿಷ್ಟ ವರ್ಗಗಳ ವಸತಿ ನಿಲಯದಲ್ಲಿ ಬಾಲಕ ರಂಗನಾಥ್ ಮೇಲೆ ಬಾಯ್ಲರ್ ಬಿದ್ದು ಸಾವನ್ನಪ್ಪಿದ್ದ.
ಈ ಸಂಬಂಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.