Friday, September 5, 2025

ಗೋವಾದ ಹಾಸ್ಟೆಲ್ ರೂಮ್‌ನಲ್ಲಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

 ವಿದ್ಯಾರ್ಥಿಯೋರ್ವ ಹಾಸ್ಟೆಲ್ ರೂಮ್‌ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗುರುವಾರ ದಕ್ಷಿಣ ಗೋವಾದ ಬಿಐಟಿಎಸ್ ಪಿಲಾನಿ ಕ್ಯಾಂಪಸ್‌ನಲ್ಲಿ ನಡೆದಿದೆ.

ರಿಷಿ ನಾಯರ್ (20) ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗುರುವಾರ ಪೋಷಕರು ಮಾಡಿದ ಕರೆಗಳಿಗೆ ರಿಷಿ ಪ್ರತಿಕ್ರಿಯಿಸಿರಲಿಲ್ಲ. ಇದರಿಂದ ಗಾಬರಿಗೊಂಡ ಪೋಷಕರು ಹಾಸ್ಟೆಲ್ ಸಿಬ್ಬಂದಿಗೆ ಕರೆ ಮಾಡಿ ಪರಿಶೀಲಿಸುವಂತೆ ಹೇಳಿದ್ದರು. ಈ ವೇಳೆ ಹಾಸ್ಟೆಲ್ ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ರಿಷಿ ಹಾಸಿಗೆ ಮೇಲೆ ಮಲಗಿದ್ದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. 

ರಿಷಿ, ಬಿಐಟಿಎಸ್ ಪಿಲಾನಿಯ ಹೈದರಾಬಾದ್ ಕ್ಯಾಂಪಸ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಆತ ಅಲ್ಲಿ ಹೈದರಾಬಾದ್‌ನ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆದರೆ ಆಕೆ ಎರಡೂವರೆ ತಿಂಗಳ ಹಿಂದೆ ಹೈದರಾಬಾದ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಳು. ಆಕೆಯ ಸಾವಿನಿಂದ ರಿಷಿ ಮಾನಸಿಕ ಖಿನ್ನತೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ. ಇದೆಲ್ಲದರಿಂದ ಹೊರಬರಲು ಆತನನನ್ನು ಹೈದರಾಬಾದ್‌ನಿಂದ ಗೋವಾದ ಬಿಐಟಿಎಸ್ ಪಿಲಾನಿ ಕಾಲೇಜಿಗೆ ಸೇರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಮರಣೋತ್ತರ ಪರೀಕ್ಷೆಯ ಬಳಿಕವೇ ನಿಖರ ಕಾರಣ ತಿಳಿದು ಬರಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ