ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಗುಂಡಿಗೆ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಅಮೆರಿಕದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ 24ರ ಹರೆಯದ ಆಂಧ್ರ ಪ್ರದೇಶ ಮೂಲದ ಯುವಕ ಗುಂಡಿಗೆ ಬಲಿಯಾಗಿದ್ದಾನೆ.

ವಿದ್ಯಾರ್ಥಿಯು ಗ್ಯಾಸ್ ಸ್ಟೇಷನ್​​ನಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಸಾವಿಗೀಡಾಗಿದ್ದಾನೆ ಎಂದು ಅಮೆರಿಕದ ಒಹಾಯೊದ ಪೊಲೀಸರು ಹೇಳಿದ್ದಾರೆ.

ಮೃತ ವಿದ್ಯಾರ್ಥಿಯನ್ನುಸಯೇಶ್ ವೀರಾ ಎಂದು ಗುರುತಿಸಲಾಗಿದೆ. ಗುರುವಾರ ಒಹಾಯೊ ರಾಜ್ಯದ ಕೊಲಂಬಸ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದೆ.

ಕೊಲಂಬಸ್ ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಸಂತ್ರಸ್ತರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಕಂಡ ಶಂಕಿತ ವ್ಯಕ್ತಿಯ ಪೋಟೊವನ್ನು ಕೊಲಂಬಂಸ್ ಡಿವಿಷನ್ ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಗ್ಯಾಸ್ ಸ್ಟೇಷನ್​​ನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ಆತ ಕೆಲವೇ ವಾರಗಳಲ್ಲಿ ಆ ಕೆಲಸ ಬಿಡುವವನಿದ್ದ ಮತ್ತು ಇನ್ನು ಹತ್ತು ದಿನಗಳಲ್ಲಿ ಆತನ ವ್ಯಾಸಂಗವು ಮುಗಿಯುವುದರಲ್ಲಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!