ಹೊಸದಿಗಂತ ಡಿಜಿಟಲ್ ಡೆಸ್ಕ್:
ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ಘಟನೆ ದಾವಣಗೆರೆ ನಗರದ ಹೊರವಲಯದ ಬಾತಿ ಕೆರೆ ಬಳಿ ನಡೆದಿದೆ.
ಆಯುರ್ವೇದ ವಿದ್ಯಾರ್ಥಿ ಮನೋಜ್ ಕುಮಾರ್(20) ಮೃತ ದುರ್ದೈವಿ. ಅಶ್ವಿನಿ ಆಯುರ್ವೇದ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾಗಿರುವ ಮನೋಜ್ ಕುಮಾರ್ ದಾವಣಗೆರೆಯ ನಿವಾಸಿ.
ರಸ್ತೆ ದಾಟುವಾಗ ಹಾಲಿನ ವಾಹನ ಡಿಕ್ಕಿಯಾಗಿ ಮನೋಜ್ ಮೃತಪಟ್ಟಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.