ಹೊಸದಿಗಂತ ವರದಿ, ವಿಜಯಪುರ:
ಹಿಜಾಬ್ ತೆಗೆದು ತರಗತಿಗೆ ಬರುವಂತೆ ಶಿಕ್ಷಕರು ಸೂಚಿಸಿದ ಹಿನ್ನೆಲೆಯಲ್ಲಿ ನಗರದ ಸರ್ಕಾರಿ ಕಾಲೇಜು ಎದುರು ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರು, ನಾವು ಯಾವುದೇ ಕಾರಣಕ್ಕೂ ಹಿಜಾಬ್ ತೆಗೆಯೋದಿಲ್ಲ ಎಂದು ಪಟ್ಟು ಹಿಡಿದು, ನಮಗೆ ಶಿಕ್ಷಣವೂ ಬೇಕು, ಹಿಜಾಬ್ ಕೂಡಾ ಬೇಕು ಎಂದು ಪ್ರತಿಭಟನೆಗೆ ಮುಂದಾದರು.
ಕೆಲ ಹೊತ್ತಿನ ಬಳಿಕ ಪ್ರತಿಭಟನಾಕರರನ್ನು ಪೊಲೀಸರು ಚದುರಿಸಿದಾಗ, ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗದೇ ಮನೆಗೆ ತರಳಿದರು.
ಇಲ್ಲಿನ ಸರ್ಕಾರಿ ಕಾಲೇಜ್ ಎದುರು ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.