ನಾನೂ ನಿಮ್ಮ ಹಾಗೆ ಡಿಸಿ ಆಗ್ತೀನಿ ಎಂದ ವಿದ್ಯಾರ್ಥಿನಿ: ತಮ್ಮ ಕುರ್ಚಿಯಲ್ಲೇ ಕೂರಿಸಿ ಬೆನ್ನುತಟ್ಟಿದ ಜಿಲ್ಲಾಧಿಕಾರಿ!

ಹೊಸದಿಗಂತ ವರದಿ,ಕಾರವಾರ :

ಪ್ರತಿಯೊಬ್ಬರಿಗೂ ಜೀವನದಲ್ಲಿ ತಮ್ಮದೇ ಆದ ಗುರಿ ಮತ್ತು ಕನಸುಗಳಿರುತ್ತವೆ .ಹೀಗೆ ತನ್ನ ಗುರಿಯ ಆಶಯ ಹೇಳಿಕೊಂಡ ವಿದ್ಯಾರ್ಥಿನಿಗೆ ಕೂಡಲೇ ಸ್ವತ: ಅದರ ಅನುಭವವನ್ನು ನೀಡಿ, ಆಕೆ ಕಂಡಿರುವ ಕನಸಿಗೆ ಸ್ಪೂರ್ತಿ ಮತ್ತು ಪ್ರೇರಣೆ ತುಂಬಿದ ಅಪರೂಪದ ಘಳಿಗೆಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ ಸಾಕ್ಷಿಯಾಗಿದ್ದಾರೆ.

ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಜಿಲ್ಲಾ ಮಟ್ಟದ ವಿಚಾರಗೋಷ್ಠಿ ಕಾರ್ಯಾಗಾರ ಉದ್ಘಾಟನೆಗೆ ಆಗಮಿಸಿದ್ದ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್, ಬಾಡದ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಲು ಉತ್ಸುಕತೆಯಿಂದ ಅವರ ಕಚೇರಿಯ ಕೊಠಡಿಗೆ ತೆರಳಿದರು.

ವಿದ್ಯಾರ್ಥಿನಿಯರೊಂದಿಗೆ ಅವರ ವಿದ್ಯಾಭ್ಯಾಸದ ಬಗ್ಗೆ ಮತ್ತು ಆರೋಗ್ಯದ ಕುರಿತು ವಿಚಾರಿಸಿದ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯ, ವಿದ್ಯಾಭ್ಯಾಸದ ನಂತರ ಮುಂದೆ ಏನಾಗಬೇಕು ಎಂದು ಕೊಂಡಿದ್ದೀರಿ ಎಂದು ವಿಚಾರಿಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು, ಡಾಕ್ಟರ್, ಲಾಯರ್, ಇಂಜಿನಿಯರ್ ಆಗುವ ಮತ್ತು ನೌಕಾಪಡೆ ಸೇರುವ ಬಗ್ಗೆ ತಿಳಿಸಿದರು. ಆದರೆ ಅದರಲ್ಲಿದ್ದ ಯಲ್ಲಾಪುರ ಮೂಲಕ 8 ನೇ ತರಗತಿ ವಿದ್ಯಾರ್ಥಿನಿ ಸುದೀಪ್ತ ಶಂಕರ್ ಅತ್ತರವಾಲ್ ಮಾತ್ರ ನಾನು ನಿಮ್ಮ ಹಾಗೆ ಡಿಸಿ ಆಗಬೇಕು, ಅದಕ್ಕೆ ಏನು ಓದಬೇಕು ಎಂದು ಜಿಲ್ಲಾಧಿಕಾರಿಗಳನ್ನೇ ಪ್ರಶ್ನಿಸಿದರು.
ಯಾವ ಕಾರಣಕ್ಕೆ ಡಿಸಿ ಆಗಬೇಕು ಎಂಬ ಜಿಲ್ಲಾಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ವಿದ್ಯಾರ್ಥಿನಿ, ಸಮಾಜದಲ್ಲಿ ಎಲ್ಲರಿಗೂ ನ್ಯಾಯ ದೊರಕಿಸಬೇಕು, ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಬೇಕು. ಆದ್ದರಿಂದ ಡಿಸಿ ಆಗಬೇಕು ಎಂದರು.

ಬಾಲಕಿಯ ಪ್ರಶ್ನೆ ಮತ್ತು ಉತ್ತರಿದಂದ ಅಚ್ಚರಿಗೊಂಡ ಜಿಲ್ಲಾಧಿಕಾರಿಗಳು, ನೀನು ಇನ್ನೂ ಚಿಕ್ಕವಳಿದ್ದೀಯಾ, ಈಗಿನಿಂದಲೇ ಚೆನ್ನಾಗಿ ಓದು. ದಿನಪತ್ರಿಕೆಗಳನ್ನು ಓದಿ ಹೆಚ್ಚಿನ ಸಾಮಾನ್ಯ ಜ್ಞಾನ ಬೆಳಸಿಕೊಳ್ಳಬೇಕು, ಪದವಿ ಶಿಕ್ಷಣದ ನಂತರ ಯುಪಿಎಸ್‌ಸಿ ಪರೀಕ್ಷೆಗೆ ಅಗತ್ಯ ತರಬೇತಿ ಪಡೆದು, ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಆಗ ಡಿಸಿ ಆಗುತ್ತಿಯಾ, ಇದಕ್ಕಾಗಿ ನಿರಂತರವಾಗಿ ಶ್ರಮ ಪಡಬೇಕು ಎಂದರು.

ನಿನ್ನ ಕನಸಿಗೆ ನನ್ನಿಂದ ಈಗಿನಿಂದಲೇ ಪ್ರೇರಣೆ ಸಿಗಲಿ ಎಂದು ತಾವು ಕುಳಿತಿದ್ದ ಕುರ್ಚಿಯಿಂದ ಕೆಳಗಿಳಿದು ವಿದ್ಯಾರ್ಥಿಯನ್ನು ಜಿಲ್ಲಾಧಿಕಾರಿ ಕುರ್ಚಿಯ ಮೇಲೆ ಕೂರಿಸಿ ಶುಭ ಹಾರೈಸಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!