ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ, ನೆರವಿಗೆ ಬಾರದ ಸಹಪ್ರಯಾಣಿಕರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಮ್ಮ ಮೆಟ್ರೋದಲ್ಲಿ ಯುವತಿಗೆ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿದ್ದು, ಈ ವೇಳೆ ಸಹಪ್ರಯಾಣಿಕರು ಯಾರೂ ನೆರವಿಗೆ ಬಾರದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನವೆಂಬರ್ 20ರಂದು ಬೆಳಗ್ಗೆ 8:30ಕ್ಕೆ ಯುವತಿಯು ಮೆಟ್ರೋ ರೈಲಿನಲ್ಲಿ ಕಾಲೇಜಿಗೆ ತೆರಳುತ್ತಿದ್ದಳು. ಈ ವೇಳೆ ಮೆಟ್ರೋದಲ್ಲಿ ಕಾಮುಕನೊಬ್ಬ ಯುವತಿಗೆ ಹಿಂಬದಿಯಿಂದ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಈ ವೇಳೆ ಸಹಾಯಕ್ಕಾಗಿ ಯುವತಿ ಅಂಗಲಾಚಿದರೂ ಸಹ ಪ್ರಯಾಣಿಕರು ನೆರವಿಗೆ ಬಂದಿಲ್ಲ. ಈ ವಿಚಾರವನ್ನು ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗ ಪಡಿಸಿದ್ದಾರೆ. ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ಘಟನೆಯನ್ನು ಖಂಡಿಸಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ತಪ್ಪಿತಸ್ಥನ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!