ಹೊಸದಿಗಂತ ಡಿಜಿಟಲ್ ಡೆಸ್ಕ್:
ಪುಣೆ ಜಿಲ್ಲೆಯ ಕೋಚಿಂಗ್ ಸೆಂಟರ್‌ನಲ್ಲಿ ಸೋಮವಾರ ತರಗತಿಯೊಳಗೆ ಕ್ಲಾಸ್ಮೇಟ್ ಒಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದರಿಂದ 16 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗರ ನಡುವಿನ ಹಿಂದಿನ ಜಗಳದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ರಾಜಗುರುನಗರದ ಖಾಸಗಿ ಕೋಚಿಂಗ್ ಸೆಂಟರ್‌ನಲ್ಲಿ ಈ ಘಟನೆ ನಡೆದಿದೆ.

