ಹೊಸದಿಗಂತ ವರದಿ ಮಂಡ್ಯ:
ಮಂಡ್ಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಪ್ರಥಮ ವರ್ಷದ ವೈದ್ಯಕೀಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಪ್ಪಳ ಮೂಲದ ಭರತ್ ಯತ್ತಿನಮನೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು, ಭಾನುವಾರ ರಾತ್ರಿ ಹಾಸ್ಟೆಲ್ನ ಕೊಠಡಿಯಲ್ಲಿ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸೋಮವಾರ ಬೆಳಿಗ್ಗೆ ಇತರೆ ವಿದ್ಯಾರ್ಥಿಗಳು ಹಾಸ್ಟೆಲ್ನ ಕೊಠಡಿಗೆ ಹೋಗಿ ನೋಡಲಾಗಿ ಪ್ರಕರಣ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೂರ್ವ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.