ಹೊಸದಿಗಂತ ಡಿಜಿಟಲ್ ಡೆಸ್ಕ್:
ಜ.21ರಂದು ಸಿಂಧನೂರು ಬಳಿ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮಂತ್ರಾಲಯ ರಾಯರ ಮಠದ ಸಂಸ್ಕೃತ ವಿದ್ಯಾರ್ಥಿ ಇಂದು ಮುಂಜಾನೆ ಹೃದಯ ಸ್ತಂಭನದಿಂದ ಮೃತಪಟ್ಟಿದ್ದಾನೆ.
ಜಯಸಿಂಹ (23) ಮೃತ ವಿದ್ಯಾರ್ಥಿ. ಈತ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ 23 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ. ಸಿಂದನೂರಿನಲ್ಲಿ ನಡೆದ ಅಪಘಾತದಲ್ಲಿ ಜಯಸಿಂಹನ ತಲೆ, ಬೆನ್ನು, ಶಾಸ್ವಕೋಶ ಸೇರಿ ದೇಹದ ಹಲವೆಡೆ ತೀವ್ರ ಗಾಯಗಳಾಗಿದ್ದವು.
ಜನವರಿ 21ರಂದು ಮಂತ್ರಾಲಯದಿಂದ ಕೊಪ್ಪಳದ ಆನೆಗುಂದಿಗೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿಯಾಗಿತ್ತು. ಈ ಅಪಘಾತದಲ್ಲಿ ನಾಲ್ಕು ಜನ ಸಾವನ್ನಪ್ಪಿದ್ದರು. 10 ಜನರಿಗೆ ಗಾಯಗಳಾಗಿದ್ದವು. ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.