ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಿಬಿಎಂಪಿ ಮತ್ತೊಂದು ಹೆಜ್ಜೆಯಿಟ್ಟಿದ್ದು, ವಜ್ರ ಬಸ್‌ಗಳಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಮಾಸಿಕ ಪಾಸ್ ವಿತರಣೆ ಮಾಡಲಾಗುತ್ತಿದೆ.
ವಜ್ರ ಬಸ್‌ನ ಮಾಸಿಕ ಪಾಸ್‌ನ ದರ 1,800 ಆಗಿದೆ. ಆದರೆ ವಿದ್ಯಾರ್ಥಿಗಳಿಗಾಗಿ ಈ ದರವನ್ನು 1,200ಗೆ ಇಳಿಸಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳು ವಜ್ರ ಬಸ್‌ನಲ್ಲಿಯೂ ಅನಿಯಮಿತ ಪ್ರಯಾಣ ಮಾಡಬಹುದಾಗಿದೆ.
ಬಸ್‌ಪಾಸ್ ಪಡೆಯಲು ವಿದ್ಯಾರ್ಥಿಗಳು ಬಿಎಂಟಿಸಿಯ ವೆಬ್‌ಸೈಟ್‌ನಲ್ಲಿ ಅರ್ಜಿ ಪಡೆಯಬೇಕು. ನಂತರ ಅದನ್ನು ಭರ್ತಿ ಮಾಡಿ ಸಂಬಂಧಪಟ್ಟ ಶಾಲೆ ಕಾಲೇಜುಗಳ ಮುಖ್ಯಸ್ಥರಿಂದ ದೃಢೀಕರಿಸಿಕೊಳ್ಳಬೇಕು. ನಂತರ ಅದನ್ನು ಬಿಎಂಟಿಸಿ ಬಸ್‌ನಿಲ್ದಾಣಗಳಲ್ಲಿ ನೀಡಿ ನಿಗದಿತ ಮೊತ್ತ ಪಾವತಿಸಿ ಪಾಸ್ ಪಡೆಯಬೇಕಿದೆ.