ನವೋದಯ ಶಾಲೆಯಲ್ಲಿ ಉಪಾಹಾರ ಸೇವಿಸಿದ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಹೊಸದಿಗಂತ ವರದಿ ಚಿತ್ರದುರ್ಗ:

ಬೆಳಗಿನ ಉಪಾಹಾರ ಸೇವಿಸಿದ ಬಳಿಕ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಹಿರಿಯೂರು ತಾಲೂಕಿನ ಉಡುವಳ್ಳಿಯಲ್ಲಿರುವ ನವೋದಯ ವಸತಿ ಶಾಲೆಯಲ್ಲಿ ನಿನ್ನೆ ಬೆಳಗ್ಗೆ ಉಪಾಹಾರ ಸೇವಿಸಿದ ಬಳಿಕ ವಿದ್ಯಾರ್ಥಿಗಳು ವಾಂತಿ, ಬೇಧಿಯಿಂದ ಅಸ್ವಸ್ಥರಾಗಿದ್ದಾರೆ.

ಕೂಡಲೇ ಅವರನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಪೋಷಕರು ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!