ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಚಿಂಗ್ ಸೆಂಟರ್ನ ಶಿಕ್ಷಕರೊಬ್ಬರು ವಿದ್ಯಾರ್ಥಿಗಳಿಗೆ ಮೂರು ವರ್ಷಗಳ ಬಾಕಿ ಇರುವ ಬೋಧನಾ ಶುಲ್ಕವನ್ನು ಪಾವತಿಸುವಂತೆ ಕೇಳಿದ್ದಕ್ಕೆ, ಶಿಕ್ಷಕರ ಮೇಲೆ ವಿದ್ಯಾರ್ಥಿಗಳು ಕಂಟ್ರಿಮೇಡ್ ಪಿಸ್ತೂಲ್ ನಿಂದ ಗುಂಡು ಹಾರಿಸಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಭೋಪಾಲ್ನ ಮೊರೆನಾ ಜಿಲ್ಲೆಯ ಜೌರಾ ರಸ್ತೆಯಲ್ಲಿ ಸಂಚಲನ ಮೂಡಿಸಿರುವ ಘಟನೆ ನಡೆದಿದೆ. ಶಿಕ್ಷಕ ಗಿರ್ವಾರ್ ಸಿಂಗ್ ಅವರಿಂದ ಬೋಧನೆ ಪಡೆದ ಇಬ್ಬರು ವಿದ್ಯಾರ್ಥಿಗಳು ಬೈಕ್ ನಲ್ಲಿ ಬಂದು ಏಕಾಏಕಿ ಪಿಸ್ತೂಲನ್ನು ಹೊರತೆಗೆದು ಸಿಂಗ್ ಅವರ ಹೊಟ್ಟೆಗೆ ಗುಂಡು ಹಾರಿಸಿದರು. ಕೂಡಲೇ ಅಲ್ಲಿಂದ ಬೈಕ್ ನಲ್ಲಿ ಪರಾರಿಯಾಗಿದ್ದಾರೆ. ಗಾಯಗೊಂಡ ಸಿಂಗ್ ಅವರನ್ನು ದಾರಿಹೋಕರು ಆಸ್ಪತ್ರೆಗೆ ಸಾಗಿಸಿದ್ದಾರೆ.
ದಾಳಿ ನಡೆಸಿದ ಇಬ್ಬರು ವಿದ್ಯಾರ್ಥಿಗಳು ಮೂರು ವರ್ಷಗಳ ಹಿಂದೆ 12ನೇ ತರಗತಿ ಪರೀಕ್ಷೆ ಬರೆಯುವವರೆಗೂ ಸಿಂಗ್ ಕೋಚಿಂಗ್ ಕೇಂದ್ರದಲ್ಲಿ ಓದಿದ್ದರು. ಪೊಲೀಸರು ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.