ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಿದ್ದು, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ನೀಡಿದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು ಇಡಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ, ಅತ್ಯಂತ ಹಿಂದುಳಿದ 46 ಅಲೆಮಾರಿ ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ ಮಾಡಲಾಗುತ್ತದೆ ಎಂದಿದ್ದಾರೆ.
ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು, ವಿದ್ಯಾರ್ಥಿನಿಲಯಗಳ ಕಟ್ಟಡಗಳ ರಿಪೇರಿ/ದುರಸ್ತಿ ಮಾಡಲು 25 ಕೋಟಿ ರೂ. ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.