Monday, August 8, 2022

Latest Posts

ಕಲಬುರಗಿ ಶಾಲೆಗಳಲ್ಲಿ ಮಕ್ಕಳಿಗೆ ಅದ್ಧೂರಿ ಸ್ವಾಗತ

ಹೊಸದಿಗಂತ ವರದಿ, ಕಲಬುರಗಿ:

ರಾಜ್ಯಾದ್ಯಂತ ಒಂದರಿಂದ ಐದನೇ ತರಗತಿವರೆಗೆ ಶಾಲೆಗಳು ಪ್ರಾರಂಭಗೊಂಡಿದ್ದು, ಜಿಲ್ಲೆಯಲ್ಲಿ ಅದ್ಧೂರಿಯಾಗಿ ಮಕ್ಕಳನ್ನು ಶಾಲೆಗೆ ಬರಮಾಡಿಕೊಳ್ಳಲಾಗಿದೆ.
ಕಲಬುರಗಿಯ ಎಸ್. ಆರ್.ಎನ್. ಮೆಹತಾ ಶಾಲೆಯಲ್ಲಿ ಅದ್ದೂರಿಯಾಗಿ ಮಕ್ಕಳನ್ನು ಶಾಲೆಗೆ ಬರಮಾಕೊಳ್ಳಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿ 1029 ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಿದ್ದು, 1 ರಿಂದ 5ನೇ ತರಗತಿವರೆಗೆ ಒಟ್ಟು 80,434 ಮಕ್ಕಳ ಸಂಖ್ಯೆ ಇದೆ.


ಈಗಾಗಲೇ ಶಾಲೆ ಕೊಠಡಿಗಳನ್ನು ಸ್ಯಾನಿಟೈಜ್ ಮಾಡಲಾಗಿದ್ದು, ಕೋವಿಡ ನಿಯಮಗಳೊಂದಿಗೆ ಶಾಲೆಗಳನ್ನು ತೆಗೆಯಬೇಕೆಂದು ಶಿಕ್ಷಣ ಇಲಾಖೆ ಸಕಲ ವ್ಯವಸ್ಥೆ ಗಳನ್ನು ಮಾಡಿತ್ತು.
ಒಂದು ಕೊಠಡಿಯಲ್ಲಿ 15-20 ಮಕ್ಕಳ ಆಸಿನಕ್ಕೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸಾಮಾಜಿಕ ಅಂತರವನ್ನು ಕಾಯ್ದುಕೊಂಡು,ಮಾಸ್ಕ್ ಧರಿಸಿ ಮಕ್ಕಳಿಗೆ ಪಾಠವನ್ನು ಹೇಳಿಕೊಡಲಾಗುತ್ತಿದೆ.
ವಾರದಲ್ಲಿ ಸೋಮವಾರದಿಂದ ಶುಕ್ರವಾರ ವಾರದವರೆಗೆ ಐದು ದಿನ ಮಾತ್ರ ಮಕ್ಕಳಿಗೆ ಪಾಠ ಹೇಳಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss