ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ವಿವಿಧ ಯೋಜನೆಗಳನ್ನು ಜಾರಿಗೊಳಿಸುತ್ತಿರುವ ಸರಕಾರ ಇದೀಗ 8ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಬಗ್ಗೆ ಚಿಂತಿಸುತ್ತಿದೆ.
ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ 2006-07ರಲ್ಲಿ ಆರಂಭಗೊಂಡ ಉಚಿತ ಸೈಕಲ್ ವಿತರಣೆ ಯೋಜನೆ ಪುನರ್ ಆರಂಭಿಸುವ ಬಗ್ಗೆ ಸುಳಿವು ನೀಡಿದ್ದಾರೆ.
ಹಲವು ವರ್ಷಗಳಿಂದ ಸೈಕಲ್ ವಿತರಣೆ ಯೋಜನೆ ಸ್ಥಗಿತಗೊಂಡಿದೆ. ಈ ಯೋಜನೆ ಪುನಾರಂಭಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಹೇಳಿದರು. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ಹಾಗೂ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಜಾರಿಗೆ ತಂದ ಉಚಿತ ಬೈಸಿಕಲ್ ವಿತರಣೆ ಯೋಜನೆಯನ್ನು ಜಾರಿಗೆ ತರುವುದಾಗಿ ಹೇಳಿದರು.