ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರದಲ್ಲಿ ನಾಪತ್ತೆಯಾಗಿದ್ದ ಮೈತೇಯಿ ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಮೃತದೇಹದ ಫೋಟೋ ವೈರಲ್ ಆಗಿದ್ದ ಬೆನ್ನಲ್ಲೇ ಭಾರಿ ಹಿಂಸಾಚಾರ ಭುಗಿಲೆದ್ದಿತ್ತು. ಇತ್ತ ಕ್ಷಿಪ್ರ ಕಾರ್ಯಾಚರಣೆಗೆ ಇಳಿದ CBI , ಪ್ರಕರಣ ಸಂಬಂಧ 6 ಮಂದಿಯನ್ನು ಬಂಧಿಸಿದೆ. ಈ ಪೈಕಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಅಪ್ರಾಪ್ತ ಬಾಲಕಿಯರು ಸೇರಿದ್ದಾರೆ.
ಮೇ.3 ರಂದು ಕುಕಿ ಹಾಗೂ ಮೈತೇಯಿ ಸಮುದಾಯದ ನಡುವಿನ ಘರ್ಷಣೆ ತಾರಕಕ್ಕೇರಿತ್ತು. ಇದೇ ವೇಳೆ ಮೈತೇಯಿ ಸಮುದಾಯದ 16 ವರ್ಷದ ಬಾಲಕಿ ಹಾಗೂ 20ರ ಹರೆಯದ ಯುವಕ ನಾಪತ್ತೆಯಾಗಿದ್ದರು.
ಅದಾದ ಬಳಿಕ ಮಣಿಪುರದ ಹಿಂಸಾಚಾರ ನಿಯಂತ್ರಣಕ್ಕೆ ಬಂದ ಹಿನ್ನೆಲೆ ಇಂಟರ್ನೆಟ್ ಸೇವೆ ಒದಗಿಸಲಾಗಿತ್ತು. ಈ ವೇಳೆ ಈ ವಿದ್ಯಾರ್ಥಿಗಳ ಮೃತದೇಹದ ಫೋಟೋ ವೈರಲ್ ಆಗಿತ್ತು. ಜೊತೆಗೆ ಮತ್ತೆ ಹಿಂಸಾಚಾರ ಆರಂಭವಾಗಿತ್ತು.
ಇದೇ ವೇಳೆ ಕಾರ್ಯಾಚರಣೆ ಆರಂಭಿಸಿದ CBI ಪೊಲೀಸರು ನಾಲ್ವರನ್ನು ಬಂಧಿಸಿದ್ದು, ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವಶಕ್ಕೆ ಪಡೆದಿದ್ದಾರೆ.