Monday, October 2, 2023

Latest Posts

ಸಮಯಕ್ಕೆ ಬಾರದ ಕೆಎಸ್‌ಆರ್‌ಟಿಸಿ ಬಸ್: ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಶಾಲಾ ಕಾಲೇಜುಗಳಿಗೆ ತೆರಳಲು ಬಸ್​ಗಳ ಕೊರತೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ವಿದ್ಯಾರ್ಥಿಗಳು ಬಸ್​ ತಡೆದು ಪ್ರತಿಭಟನೆ ನಡೆಸಿದ್ದಾರೆ.

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿ ಈ ಘಟನೆ ನಡೆದಿದೆ. ಶಾಲಾ ಕಾಲೇಜು ಸಮಯದಲ್ಲಿ ಹೆಚ್ಚು ಸರ್ಕಾರಿ ಬಸ್ ಗಳು ಬರುತ್ತಿಲ್ಲ. ಹೆಚ್ಚುವರಿ ಬಸ್​ಗಳ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್ಆರ್‌ಟಿಸಿ ಬಸ್ ತಡೆದು ಪ್ರತಿಭಟನೆ ಮಾಡಿದ್ದಾರೆ.

ವಿದ್ಯಾರ್ಥಿಗಳು ಶಾಲಾ ಕಾಲೇಜು ಸಮಯದಲ್ಲಿ ಹೆಚ್ಚು ಸರ್ಕಾರಿ ಬಸ್ ಗಳು ಬರುತ್ತಿಲ್ಲ ಎಂದು ಆರೋಪಿಸಿದ್ದಾರೆ. ಈ ಸಂದರ್ಭ ಮಕ್ಕಳು, “ನಿಗದಿತ ಸಮಯಕ್ಕೆ ಬಸ್​ಗಳು ಬಾರದೇ ಇರುವ ಕಾರಣ ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಬಸ್​ಗಳನ್ನು ವ್ಯವಸ್ಥೆ ಮಾಡಿ” ಎಂದು ಒತ್ತಾಯಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!