spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಸ್ ಸೌಲಭ್ಯಕ್ಕಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸಿದ ಕಾಲೇಜು ವಿದ್ಯಾರ್ಥಿಗಳು

- Advertisement -Nitte

ಹೊಸದಿಗಂತ ವರದಿ, ಯಾದಗಿರಿ:

ಬಸ್ಸಿನ ಸವಲತ್ತು ಒದಗಿಸುವಂತೆ ಗುರುವಾರದಂದು ಬೆಳಿಗ್ಗೆ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ಏಕೆ ಪ್ರತಿಭಟನೆ?
ಕಾಲೇಜು ಪ್ರಾರಂಭಗೊಂಡು ಏರಡು ತಿಂಗಳು ಕಳೆದಿವೆ. ಕಾಲೇಜಿಗೆ ಹೋಗಲು ಬಸ್‌ ಸಿಗುತ್ತಿಲ್ಲ. ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಪ್ರವೇಶ ಇಲ್ಲ ಎಂದು ಬಸ್ ಹತ್ತಿದ ವಿದ್ಯಾರ್ಥಿಗಳನ್ನು ಕೆಳಗಿಸಿಳಿಸುತ್ತಾರೆ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ ಎಂದು ಶಹಾಪೂರ ತಾಲೂಕಿನ ದೋರನಳ್ಳಿಗ್ರಾಮದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಸ್ಥಳಕ್ಕೆ ಆಗಮಿಸಿದ ರಾಜ್ಯ ರೈತಮೊರ್ಚಾ ಪ್ರಧಾನ ಕಾರ್ಯದರ್ಶಿ: ದೊರನಳ್ಳಿ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಈ ಸಂಧರ್ಭದಲ್ಲಿ ಬಿಜೆಪಿ ರಾಜ್ಯ ರೈತಮೊರ್ಚಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಗೌಡ ಮಾಗನೂರ ಆಗಮಿಸಿ ವಿಧ್ಯಾರ್ಥಿಗಳ ಬೇಡಿಕೆಗಳ ಕುರಿತು ಮೇಲಾಧಿಕಾರಿಗಳ ಗಮನಕ್ಕೆ ತಂದರು.
ಪಿಎಸ್.ಐ ಚಂದ್ರಕಾಂತ ಮಾಕಾಲೆಯವರು ಸೂಕ್ತ ಪೋಲಿಸ್ ಬಂದೋಬಸ್ತ್ ನೀಡಿ ಬಸ್ ಸೌಕರ್ಯ ಒದಗಿಸುವಂತೆ ಅಧಿಕಾರಿಗಳಿಗೆ ಮಾಹಿತಿ ನೀಡುವುದಾಗಿ ತಿಳಿಸಿದರು. ಸಾರಿಗೆ ಅಧಿಕಾರಿಗಳು ದೋರನಳ್ಳಿ ಮತ್ತು ಸಹಾಪೂರ ಮಧ್ಯೆ ಪ್ರತ್ಯೇಕ ಬಸ್ಸಿನ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss