ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಹೊಸದಿಗಂತ ವರದಿ, ಚಿತ್ರದುರ್ಗ:

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಪೂರ್ಣ ಪ್ರಮಾಣದಲ್ಲಿ ನೇಮಕ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಸರ್ಕಾರಿ ಕಲಾ ಕಾಲೇಜಿನಿಂದ ಹೊರಟ ಪ್ರತಿಭಟನಾಕಾರರು ನಂತರ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
ಈಗ ರಾಜ್ಯದಲ್ಲಿ ಪೂರ್ಣ ಪ್ರಮಾಣದ ತರಗತಿಗಳನ್ನು ನಡೆಸಲು ನೇಮಕವಾಗಿರುವ ಅತಿಥಿ ಉಪನ್ಯಾಸಕರುಗಳು ಸೇವಾ ಭದ್ರತೆ ಹಾಗೂ ಹೆಚ್ಚಿನ ಗೌರವಧನಕ್ಕಾಗಿ ಹೋರಾಟವನ್ನು ಕಳೆದ ೧೦ ರಿಂದ ಪ್ರಾರಂಭ ಮಾಡಿದ್ದಾರೆ ಇದರಿಂದಾಗಿ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪಾಠ ನಡೆಯದೆ ತೊಂದರೆಯಾಗಿದೆ. ಕರೋನಾ ಎರಡನೇ ಅಲೆಗೆ ತತ್ತರಿಸಿ ಈಗ ಪ್ರಾರಂಭವಾಗಿರುವ ಕಾಲೇಜುಗಳಲ್ಲಿ ಸರಿಯಾದ ರೀತಿಯಲ್ಲಿ ಪಾಠ ನಡೆಯದೇ ಮಕ್ಕಳಿಗೆ ತೊಂದರೆಯಾಗಿದೆ ಇದ್ದಲ್ಲದೆ ಸರ್ಕಾರವೂ ಸಹಾ ಅತಿಥಿ ಉಪನ್ಯಾಸಕರನ್ನು ತಡವಾಗಿ ನೇಮಕ ಮಾಡಿದ್ದಲ್ಲದೆ ಶೇ. ೮೦ರಷ್ಟು ಮಾತ್ರ ಉಪನ್ಯಾಸಕರನ್ನು ಮಾತ್ರ ನೇಮಕ ಮಾಡಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.
ಈ ತಿಂಗಳ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಪ್ರಾರಂಭವಾಗಲಿದ್ದು, ಅದಷ್ಟು ಬೇಗ ಈ ಸಮಸ್ಯೆಗೆ ಪರಿಹಾರವನ್ನು ಕಂಡುಕೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೂಡಬೇಕಿದೆ. ಇದ್ದಲ್ಲದೆ ಉಳಿದ ಶೇ. ೨೦ ರಷ್ಟು ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳು ನಡೆಯುವಂತೆ ಕ್ರಮ ಕೈಗ್ಗೊಳ್ಳಬೇಕೆಂದು ಸರ್ಕಾರವನ್ನು ಎ.ಬಿ.ವಿ.ಪಿ. ಆಗ್ರಹಿಸಿದ್ದು, ಇದರ ಬಗ್ಗೆ ಶೀಘ್ರವಾಗಿ ಕ್ರಮ ತೆಗೆದುಕೊಳ್ಳದಿದ್ದರೆ ಮುಂದಿನ ದಿನದಲ್ಲಿ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ಆದರ್ಶ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!