ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡಲ್ಲ: ನೀಟ್‌ ಅಕ್ರಮದ ಕುರಿತು ಮೋದಿ ಮಾತು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭೆಯಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯದ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ , ನೀಟ್‌ ಅಕ್ರಮದ ಕುರಿತು ಮಾತನಾಡಿದರು.

ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಗಂಭೀರ ವಿಷಯವಾಗಿದೆ. ಇದು ನಮಗೂ ಆತಂಕ ತಂದಿದೆ. ಆದರೆ, ದೇಶದ ಯುವಕ-ಯುವತಿಯರಿಗೆ ನಮ್ಮ ಸರ್ಕಾರ ಒಂದು ಭರವಸೆ ನೀಡುತ್ತದೆ. ಯಾವುದೇ ಕಾರಣಕ್ಕೂ ನಿಮ್ಮ ಭವಿಷ್ಯಕ್ಕೆ ತೊಂದರೆಯಾಗಲು ನಾವು ಬಿಡುವುದಿಲ್ಲ. ನೀಟ್‌ ವಿಷಯದಲ್ಲಿ ಅಕ್ರಮ ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಿದೆ. ಇದಕ್ಕಾಗಿ ಮುಂದಿನ ದಿನಗಳಲ್ಲೂ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಹಲವು ಕ್ರಮ ತೆಗೆದುಕೊಳ್ಳಲಾಗಿದೆ. ಹಾಗಾಗಿ, ದೇಶದ ಯುವಕ-ಯುವತಿಯರು ಯೋಚಿಸಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!