ಹೊಸದಿಗಂತ ವರದಿ ರಾಯಚೂರು :
ಆಲ್ಕೋಡ್ ಗ್ರಾಮದ ಕಸ್ತೂರಬಾ ವಸತಿ ಶಾಲೆಯಲ್ಲಿ ಉಪಹಾರ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಆಸ್ಪತ್ರೆ ಪಾಲಾದ ಘಟನೆ ಆಲ್ಕೊಡ ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಆಲ್ಕೊಡ ಗ್ರಾಮದಲ್ಲಿ ಮಂಗಳವಾರ ಜರುಗಿದೆ ಬೆಳಗ್ಗೆ ಚಿತ್ರಾನ್ನ ಸೇವಿಸಿದ ವಿದ್ಯಾರ್ಥಿಗಳಲ್ಲಿ ಹತ್ತಕ್ಕೂ ಹೆಚ್ಚು ಅಸ್ವಸ್ಥರಾಗಿದ್ದಾರೆ.
ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಅರಕೇರಾ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ತಹಶೀಲ್ದಾರ ಮಲ್ಲಪ್ಪ ಗಂಟಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿರುವರು.