ಡೋರ್ ಓಪನ್ ಆಗದೆ ಲಿಫ್ಟ್ ಒಳಗೆ ಸಿಲುಕಿಕೊಂಡ ವಿದ್ಯಾರ್ಥಿಗಳು

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇತ್ತೀಚೆಗೆ ಕಾರ್ಯಾರಂಭಗೊಂಡ ಬಹುಮಹಡಿ ಕಟ್ಟಡದ ಲಿಫ್ಟ್ ಬಾಗಿಲು ತೆಗೆದುಕೊಳ್ಳದೆ ವಿದ್ಯಾರ್ಥಿಗಳು ಒಳಗೆ ಸಿಲುಕಿಕೊಂಡಿದ್ದಾರೆ.

ವಿದ್ಯಾರ್ಥಿಗಳು ಸಾಗುತ್ತಿದ್ದ ಲಿಫ್ಟ್ ನಲ್ಲಿ ಎಷ್ಟು ಹೊತ್ತಾದರೂ ಬಾಗಿಲು ತೆರೆಯದೇ ಅದರ ಒಳಗೆ ಸಿಲುಕಿದ್ದರು. ಈ ವೇಳೆ ಉಸಿರಾಟದ ತೊಂದರೆ ಕಂಡುಬಂದಿದ್ದು, ಕೂಡಲೇ ಮನೆಯವರಿಗೆ ಕರೆ ಮಾಡಿ ಸಮಸ್ಯೆಯನ್ನು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು ಕೂಡಲೇ ತಕ್ಷಣ ಸ್ಥಳಕ್ಕೆ ಧಾವಿಸಿ ಲಿಫ್ಟ್ ಬಾಗಿಲನ್ನು ಬಲಾತ್ಕಾರವಾಗಿ ತೆಗೆದು ವಿದ್ಯಾರ್ಥಿಗಳನ್ನು ರಕ್ಷಿಸಿದ್ದಾರೆ. ವಿಟ್ಲ ಸರಕಾರಿ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗಿದೆ.

ಈ ಕಟ್ಟಡದಲ್ಲಿ ಅಳವಡಿಸಲಾದ ಕಂಪನಿಯ ಲಿಫ್ಟ್ ಚೈನ್ ಪುಲ್ಲಿ ತುಂಡಾಗಿ ಕಾರ್ಮಿಕರು ಗಾಯಗೊಂಡ ಘಟನೆ ಮಂಗಳೂರು ಕೂಳೂರಿನಲ್ಲಿ ನಡೆದಿತ್ತು. ಈಗ ಅದೇ ಸ್ವಿಫ್ಟ್ ಸ್ಪೇಸ್ ಸಂಸ್ಥೆಯ ತಾಂತ್ರಿಕ ದೋಷದಿಂದ ಲಿಫ್ಟ್‌ನಲ್ಲಿ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!