ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆ ಅಧ್ಯಕ್ಷರ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು,ಫಲಿತಾಂಶ ಘೋಷಿಸಲಿದ್ದಾರೆ.
ನಾಳೆ ಮಧ್ಯಾಹ್ನ 1.30ರ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ಲಭ್ಯವಿದೆ.
ರಾಜ್ಯಾದ್ಯಂತ ಮಾರ್ಚ್ 1ರಿಂದ ಮಾರ್ಚ್ 20 ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು.
ರಿಸಲ್ಟ್ ಪರಿಶೀಲಿಸುವುದು ಹೇಗೆ?
– ರಾಜ್ಯ ಸರ್ಕಾರದ ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಅಥವಾ kseab.karnataka.gov.in ಗೆ ಭೇಟಿ ನೀಡಬೇಕು.
– ಹೋಂ ಪೇಜ್‌ನಲ್ಲಿ Second PU Results 2025 ಲಿಂಕ್ ಕ್ಲಿಕ್ ಮಾಡಬೇಕು.
– ರಿಜಿಸ್ಟ್ರೇಷನ್ ನಂಬರ್ (ನೋಂದಣಿ ಸಂಖ್ಯೆ) ಮತ್ತು ಪಾಸ್‌ವರ್ಡ್ ನಮೂದಿಸಬೇಕು.
– Second PU Results 2025 ಎಂಬುದು ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ.