April 8, 2026
Wednesday, April 8, 2026
spot_img

ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದ್ದು, ಏಪ್ರಿಲ್ 9 ರಂದು ಅಧಿಕೃತವಾಗಿ ಪ್ರಕಟವಾಗಲಿದೆ.

ಮಾಧ್ಯಹ್ನ 3 ಗಂಟೆಗೆ ವೇಳೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ವಿವರಗಳನ್ನು ಹಂಚಿಕೊಳ್ಳಲಿದ್ದಾರೆ. ಆ ಬಳಿಕ ಅಧಿಕೃತ ವೆಬ್‌ಸೈಟ್ ಗಳಲ್ಲಿ ನೋಡಬಹುದಾಗಿದೆ.

ದ್ವಿತೀಯ ಪಿಯುಸಿಪರೀಕ್ಷೆ 1 ಅನ್ನು ಫೆಬ್ರವರಿ 28 ರಿಂದ ಮಾರ್ಚ್ 17, 2026 ರವರೆಗೆ 1,217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿತ್ತು.

ಫಲಿತಾಂಶ ವೀಕ್ಷಿಸುವುದು ಹೇಗೆ?

ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್: https://karresults.nic.in ಲಿಂಕ್ ಮೂಲಕ ಫಲಿತಾಂಶ ವೀಕ್ಷಿಸಬಹುದು.

‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ

ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ , ‘Submit’ ಬಟನ್ ಒತ್ತಿದ ತಕ್ಷಣ ಅಂಕಪಟ್ಟಿ ಸಿಗಲಿದೆ.

https://www.digilocker.gov.in/ ಬಳಸಿ ಅಂಕಪಟ್ಟಿ ಡೌನ್‌ಲೋಡ್ ಮಾಡಿಕೊಳ್ಳಬಹುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !