May 19, 2026
Tuesday, May 19, 2026
spot_img

ವಿದ್ಯಾರ್ಥಿಗಳೇ ಗಮನಿಸಿ: ನಾಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಳೆ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಭಾರೀ ಚರ್ಚೆಯ ಕೇಂದ್ರಬಿಂದುವಾಗಿದ್ದ ತೃತೀಯ ಭಾಷೆ ಅಂಕ ವಿಚಾರಕ್ಕೆ ಸಂಬಂಧಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯ ಬಳಿಕ ಸಚಿವ ಮಧು ಬಂಗಾರಪ್ಪ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಬಹುದು:

ಅಧಿಕೃತ ವೆಬ್‌ಸೈಟ್‌: karresults.nic.in ಅಥವಾ kseab.karnataka.gov.in.

ಬಳಿಕ ಮುಖಪುಟದಲ್ಲಿ ಕಾಣುವ ‘SSLC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು (DOB) ಸರಿಯಾಗಿ ನಮೂದಿಸಿ.

‘Submit’ ಬಟನ್ ಒತ್ತಿರಿ.

ವೆಬ್‌ಸೈಟ್ ಮಾತ್ರವಲ್ಲದೆ, ವಿದ್ಯಾರ್ಥಿಗಳು DigiLocker ಮತ್ತು KarnatakaOne ಅಪ್ಲಿಕೇಶನ್ ಮೂಲಕವೂ ಫಲಿತಾಂಶವನ್ನು ಪಡೆಯಬಹುದಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !