ಹಿಜಾಬ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು; ಕರ್ತವ್ಯಲೋಪದಡಿ ಇಬ್ಬರು ಸಹಶಿಕ್ಷಕರು ಅಮಾನತು

ಹೊಸದಿಗಂತ ವರದಿ, ಗದಗ
ನಗರದ ಸಿ.ಎಸ್.ಪಾಟೀಲ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ನಡೆಯುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಕನ್ನಡ ಪರೀಕ್ಷೆ ವೇಳೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆದಿದ್ದರು. ಈ ವಿಚಾರ ಬಯಲಾದ ಬೆನ್ನಲ್ಲೇ ಕರ್ತವ್ಯಲೋಪದ ಅಡಿಯಲ್ಲಿ ಇಬ್ಬರು ಸಹ ಶಿಕ್ಷಕರನ್ನು ಅಮಾನತ್ತುಗೊಳಿಸಿ ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಆದೇಶ ಹೊರಡಿಸಿದ್ದಾರೆ.
ಸಿ.ಎಸ್.ಪಾಟೀಲ ಬಾಲಕರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರ ಸಂಖ್ಯೆ 08 ರಲ್ಲಿ ಮೇಲ್ವಿಚಾರಕರಾಗಿದ್ದ ಎಸ್.ಎಂ.ಕೃಷ್ಣಾ ನಗರದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನಂ.12ರ ಸಹ ಶಿಕ್ಷಕ ಎಸ್.ಯು.ಹೊಕ್ಕಳದ ಹಾಗೂ ಸಿ.ಎಸ್.ಪಾಟೀಲ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರ ಸಂಖ್ಯೆ 04 ರಲ್ಲಿ ಮೇಲ್ವಿಚಾರಕರಾಗಿದ್ದ
ಸಿದ್ಧಲಿಂಗ ನಗರದ ಸರಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಎಸ್.ಎಂ.ಪತ್ತಾರ ಅವರನ್ನು ಅಮಾನತುಗೊಂಡಿದ್ದಾರೆ. ಅಲ್ಲದೆ, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಇಬ್ಬರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!