ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಎಡವಟ್ಟು, ಮರು ಪರೀಕ್ಷೆಗೆ ಸಿಎಂ ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ ಬೆನ್ನಲ್ಲೇ ಮರು ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಪಿಎಸ್ ಸಿಗೆ ಸೂಚಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಂತ್ರಿ, ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪರೀಕ್ಷೆಯಲ್ಲಿ ಅಸಮರ್ಪಕ ಕನ್ನಡ ಅನುವಾದದ ಪ್ರಶ್ನೆಗಳ ವರದಿಯ ಹಿನ್ನೆಲೆಯಲ್ಲಿ, ಎಲ್ಲಾ ಅಭ್ಯರ್ಥಿಗಳಿಗೆ ನ್ಯಾಯಸಮ್ಮತತೆಯನ್ನು ಖಚಿತಪಡಿಸಿಕೊಳ್ಳಲು 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ ಕೆಪಿಎಸ್ ಎಸ್ ಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಈ ಲೋಪಗಳಿಗೆ ಕಾರಣರಾದವರನ್ನು ಕರ್ತವ್ಯದಿಂದ ಮುಕ್ತಗೊಳಿಸಲಾಗಿದೆ. ಮುಂಬರುವ ಪರೀಕ್ಷೆಯನ್ನು ಅತ್ಯಂತ ಜವಾಬ್ದಾರಿ ಮತ್ತು ಹೊಣೆಗಾರಿಕೆಯೊಂದಿಗೆ ನಡೆಸಲಾಗುವುದು. ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆಯನ್ನು ಎತ್ತಿಹಿಡಿಯಲು ನಾವು ಬದ್ಧರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!