ಹೊಸದಿಗಂತ ಡಿಜಿಟಲ್ ಡೆಸ್ಕ್:
ದಕ್ಷಿಣ ಆಫ್ರಿಕಾ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಬ್ಯಾಟಿಂಗ್ ವೈಫಲ್ಯ ಅನುಭಿಸಿದ್ದು ಕೇವಲ 125 ರನ್ಗಳ ಸಾಧಾರಣ ಗುರಿ ನೀಡಿದೆ.
ಮೊದಲ ಪಂದ್ಯದಲ್ಲಿ 202ರನ್ಗಳಿಸಿದ್ದ ಟೀಮ್ ಇಂಡಿಯಾ ಬ್ಯಾಟರ್ಗಳು 2ನೇ ಪಂದ್ಯದಲ್ಲಿ ದಯನೀಯ ವೈಫಲ್ಯ ಅನುಭವಿಸಿದರು. ಹಾರ್ದಿಕ್ ಪಾಂಡ್ಯ ಸಿಡಿಸಿದ ನಿರ್ಣಾಯಕ 39 ರನ್ಗಳ ನೆರವಿನಿಂದ ಟೀಮ್ ಇಂಡಿಯಾ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 124 ರನ್ಗಳಿಸಿದೆ.
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಟೀಮ್ ಇಂಡಿಯಾ ಮೊದಲ ಓವರ್ನಲ್ಲೇ ಕಳೆದ ಪಂದ್ಯದ ಶತಕ ವೀರ ಸಂಜು ಸ್ಯಾಮ್ಸನ್ ವಿಕೆಟ್ ಕಳೆದುಕೊಂಡಿತು. ಅಭಿಷೇಕ್ ಶರ್ಮಾ (4), ಸೂರ್ಯಕುಮಾರ್ ಯಾದವ್ (4), ತಿಲಕ್ ವರ್ಮಾ (20), ರಿಂಕು ಸಿಂಗ್ (9) ದಕ್ಷಿಣ ಆಫ್ರಿಕಾದ ಬೌಲರ್ಗಳ ದಾಳಿಗೆ ಉತ್ತರಿಸಲಾಗದೇ ವಿಕೆಟ್ ಒಪ್ಪಿಸಿದರು. 21 ಎಸೆತಗಳಲ್ಲಿ 4 ಬೌಂಡರಿ ಸಹಿತ 27ರನ್ಗಳಿಸಿದ್ದ ಅಕ್ಷರ್ ಪಟೇಲ್ ರನ್ಔಟ್ ಆದರು.