Thursday, September 4, 2025

ಒಟಿಟಿಗೂ ಎಂಟ್ರಿಕೊಟ್ಟ ಥಿಯೇಟರ್‌ನಲ್ಲಿ ಭಾರೀ ಸದ್ದು ಮಾಡಿದ ‘ಸು ಫ್ರಮ್ ಸೋ’: ಬಿಡುಗಡೆ ಡೇಟ್ ಫಿಕ್ಸ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸ್ಯಾಂಡಲ್ ವುಡ್ ನಲ್ಲಿ ಬಿಗ್ ಹಿಟ್ ಆದ ಸಿನಿಮಾ ‘ಸು ಫ್ರಮ್ ಸೋ’ ಒಟಿಟಿಗೆ ಬರಲು ಸಜ್ಜಾಗಿದೆ.

ಯಾವುದೇ ಪ್ರಚಾರ ಇಲ್ಲದೆ ತೆರೆಕಂಡು ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿದ ಚಿತ್ರ ನೂರು ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಇದೀಗ ಈ ಸಿನಿಮಾವನ್ನು ಥಿಯೇಟರ್‌ನಲ್ಲಿ ನೋಡಿಲ್ಲ ಅನ್ನುವವರಿಗೆ ಗುಡ್‌ನ್ಯೂಸ್ ಸಿಕ್ಕಿದ್ದು ಒಟಿಟಿಯಲ್ಲಿ (OTT) ಬಿಡುಗಡೆಗೆ ಸಜ್ಜಾಗಿದೆ.

ಜೆ.ಪಿ. ತುಮ್ಮಿನಾಡ್ ನಿರ್ದೇಶನದ ಕಾಮಿಡಿ ಎಂಟರ್‌ಟೈನರ್ ಸಿನಿಮಾ ಎಲ್ಲ ವರ್ಗದ ಪ್ರೇಕ್ಷಕರನ್ನು ರಂಜಿಸಿದೆ. ಹಾಸ್ಯ ಮತ್ತು ಭಾವನಾತ್ಮಕ ಕಥೆಯ ಚಿತ್ರವೇ ‘ಸು ಫ್ರಂ ಸೋʼ. ಇದೀಗ ಚಿತ್ರ ಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಂಡ ನಂತರ, ​ಚಿತ್ರದ ನಿರ್ಮಾಪಕರು ಒಟಿಟಿ ಬಿಡುಗಡೆಯ ದಿನಾಂಕವನ್ನು ಘೋಷಿಸಿದ್ದಾರೆ. ಸೆಪ್ಟೆಂಬರ್ 5ರಂದು ಜಿಯೋ ಹಾಟ್ ಸ್ಟಾರ್ ಡಿಜಿಟಲ್ ಪ್ಲಾಟ್‌ಫಾರ್ಮ್‌ನಲ್ಲಿ ‘ಸು ಫ್ರಂ ಸೋ’ ಚಿತ್ರ ಪ್ರಸಾರವಾಗಲಿದೆ.

ಕಡಿಮೆ ಬಜೆಟ್‌ನಲ್ಲಿ ನಿರ್ಮಾಣವಾದ ಈ ಚಿತ್ರ ಕಲೆಕ್ಷನ್ ವಿಚಾರದಲ್ಲಿ ಎಲ್ಲರನ್ನೂ ಅಚ್ಚರಿಗೊಳಿಸಿದೆ. ಚಿತ್ರವು 100 ಕೋಟಿ ರೂ.ಗೂ ಅಧಿಕ ಗಳಿಸಿ ಕನ್ನಡ ಚಿತ್ರರಂಗದ ಬ್ಲಾಕ್‌ಬಸ್ಟರ್ ಚಿತ್ರಗಳ ಸಾಲಿಗೆ ಸೇರಿದೆ. ಕನ್ನಡದ ಜತೆಗೆ ತೆಲುಗು ಮತ್ತು ಮಲಯಾಳಂ ಭಾಷೆಗಳಿಗೂ ಡಬ್ ಆಗಿ ಅಲ್ಲಿಯೂ ಯಶಸ್ಸು ಕಂಡಿದೆ. ​

ಇದನ್ನೂ ಓದಿ