ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಹೆಚ್‌ಬಿಆರ್ ಬಡಾವಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಶಾಲಿನಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸೋಮವಾರ ರಾತ್ರಿ ಹೆಚ್‌ಬಿಆರ್ ಬಡಾವಣೆಯಲ್ಲಿರುವ ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತಿ ನಾಗರಾಜ್ ಕೆ.ಜಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮೃತ ಶಾಲಿನಿ ಮೊದಲ ಪತಿಗೆ ವಿಚ್ಛೇದನ ನೀಡಿದ ಬಳಿಕ ನಾಗರಾಜ್ ಅವರನ್ನ 2ನೇ ಮದುವೆಯಾಗಿದ್ದರು. ಘಟನೆ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.