ಹೊಸದಿಗಂತ ಡಿಜಿಟಲ್ ಡೆಸ್ಕ್:
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತ ಚಾರಣಕ್ಕೆ ಮುಕ್ತವಾಗಿದೆ. ಮಳೆಯ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಚಾರಣಿಗರಿಗೆ ಅವಕಾಶ ನೀಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಮಳೆಗಾಲದಲ್ಲಿ ವಿಪರೀತ ಮಳೆ ಹಿನ್ನೆಲೆ ಟ್ರೆಕ್ಕಿಂಗ್ ಪ್ರಿಯರ ಹಿತದೃಷ್ಟಿಯಿಂದ ಕುಮಾರಪರ್ವತ ಚಾರಣವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗುತ್ತದೆ. ಇದೀಗ ಮಳೆ ಕಡಿಮೆಯಾಗುತ್ತಿದ್ದಂತೆಯೇ ನಿಷೇಧ ತೆರವು ಮಾಡಲಾಗಿದೆ. ಇದೀಗ ನಿರ್ಬಂಧಗಳನ್ನು ತೆರವುಗೊಳಿಸಿ ಕೆಲವು ಷರತ್ತುಗಳೊಂದಿಗೆ ಮತ್ತೆ ಚಾರಣಕ್ಕೆ ಅವಕಾಶ ನೀಡಲಾಗಿದೆ.