ಪ್ರಧಾನಿ ಮೋದಿ ಶಿಕ್ಷಣ ಅರ್ಹತೆ ಪ್ರಶ್ನೆ ಮಾಡಿದವರಿಗೆ ಪದವಿ ಪ್ರಮಾಣ ಪತ್ರ ಬಿಡುಗಡೆ ಮಾಡಿ ಉತ್ತರಕೊಟ್ಟ ಸುಬ್ರಮಣಿಯನ್‌ ಸ್ವಾಮಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಿ ನರೇಂದ್ರ ಮೋದಿಯವರ ಶಿಕ್ಷಣ ಅರ್ಹತೆ ಬಗ್ಗೆ ಅನುಮಾನ ವ್ಯಕ್ತಪಡಿಸಿ, ಅವರ ಪದವಿ ಪ್ರಮಾಣ ಪತ್ರ ಒದಗಿಸುವಂತೆ ಆರ್​ಟಿಐ ಕಾಯ್ದೆಯಡಿ ಕೇಳಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ಗೆ ನಿನ್ನೆಯಷ್ಟೇ (ಮಾ.31) ಗುಜರಾತ್​ ಹೈಕೋರ್ಟ್​ 25 ಸಾವಿರ ರೂಪಾಯಿ ದಂಡ ವಿಧಿಸಿತ್ತು. ಜೊತೆಗೆ ಪ್ರಧಾನಿ ಮೋದಿ ಅವರ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರಗಳನ್ನು ಯಾರಿಗೂ ಒದಗಿಸುವ ಅಗತ್ಯವಿಲ್ಲ ಎಂದು ಸ್ಪಷ್ಟವಾಗಿ ತೀರ್ಪು ನೀಡಿತ್ತು.

ಇದೀಗ ಇಂದು ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ, ಕಲಾ ವಿಭಾಗದಲ್ಲಿ ಗುಜರಾತ್‌ನ ವಿಶ್ವವಿದ್ಯಾಲಯದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಪಡೆದಿದ್ದಾರೆ ಎನ್ನಲಾದ ಸ್ನಾತಕೋತ್ತರ ಪದವಿ ಪ್ರಮಾಣ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.
ಇದರಲ್ಲಿ 2016ರಲ್ಲಿ ಅಮಿತ್‌ ಶಾ ಮತ್ತು ಅರುಣ್‌ ಜೇಟ್ಲಿ ಅವರು ಪತ್ರಿಕಾಗೋಷ್ಠಿ ನಡೆಸಿ ಬಿಡುಗಡೆ ಮಾಡಿದ್ದ ಪ್ರಮಾಣ ಪತ್ರ ಇದಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿ ಪೋಸ್ಟ್ ಮಾಡಿರುವ ಅವರು, ‘ಮೋದಿಯವರ ವಿದ್ಯಾರ್ಹತೆಯ ಬಗ್ಗೆ ಯಾಕೆ ಇಷ್ಟೊಂದು ಗಲಾಟೆ? ಆರು ವರ್ಷಗಳ ಹಿಂದೆ ಅಮಿತ್ ಶಾ ಮತ್ತು ಅರುಣ್‌ ಜೇಟ್ಲಿ ಜಂಟಿ ಮಾಧ್ಯಮಗೋಷ್ಠಿಯನ್ನು ನಡೆಸಿ, ನರೇಂದ್ರ ಮೋದಿ ಅವರ ಪದವಿ ಪ್ರಮಾಣ ಪತ್ರಗಳನ್ನು ಪ್ರದರ್ಶಿಸಿದ್ದರು. ಅದನ್ನು ಸುದ್ದಿ ಸಂಸ್ಥೆ ಎಎನ್‌ಐ ಪ್ರಕಟಿಸಿತ್ತು ಎಂದು ಭಾವಿಸುತ್ತೇನೆ’ ಎಂದು ಪತ್ರವನ್ನು ಬಿಡುಗಡೆಗೊಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಬಿಎ ಮತ್ತು ಎಂಎ ಪದವಿ ಪ್ರಮಾಣ ಪತ್ರಗಳನ್ನು 2016 ರಲ್ಲಿ ಬಿಜೆಪಿ ಬಿಡುಗಡೆ ಮಾಡಿತ್ತು. ಈ ದಾಖಲೆಗಳನ್ನು ನಕಲಿ ಎಂದು ಎಎಪಿ ಆರೋಪಿಸಿತ್ತು.ಈ ಹಿನ್ನೆಲೆಯಲ್ಲಿ ಸ್ವತಃ ಪತ್ರಿಕಾಗೋಷ್ಠಿ ನಡೆಸಿದ್ದ ಬಿಜೆಪಿಯ ಹಿರಿಯ ನಾಯಕರಾದ ಅಮಿತ್ ಶಾ ಮತ್ತು ದಿವಂಗತ ಅರುಣ್ ಜೇಟ್ಲಿ, ಪದವಿ ಪ್ರಮಾಣ ಪತ್ರಗಳ ಪ್ರತಿಗಳನ್ನು ಬಿಡುಗಡೆ ಮಾಡಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!