ಕಡೆಗೂ ಸಂಧಾನ ಸಕ್ಸಸ್‌: ಬಿಜೆಪಿ ಅಭ್ಯರ್ಥಿ ಪರ ಕರಡಿ ಸಂಗಣ್ಣ ಮತಯಾಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬಿಜೆಪಿ ಟಿಕೆಟ್‌ ಕೈ ತಪ್ಪಿದ್ದರಿಂದ ಮುನಿಸಿಕೊಂಡಿದ್ದ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಅವರ ಅಸಮಾಧಾನ ಕಡೆಗೂ ಕರಗಿದೆ.

ಪಕ್ಷದ ವರಿಷ್ಠರ ಸೂಚನೆ ಮೇರೆಗೆ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟರ್‌ ಪರವಾಗಿ ಕರಡಿ ಪ್ರಚಾರದಲ್ಲಿ ತೊಡಗಿದ್ದಾರೆ.

ಸದ್ಯಕ್ಕೆ ಕಾಂಗ್ರೆಸ್ ಸೇರುವ ಯೋಚನೆ ಕೈ ಬಿಟ್ಟಿರುವ ಕರಡಿ ಸಂಗಣ್ಣ ಕಾಂಗ್ರೆಸ್ ಸೇರುವುದಿಲ್ಲ, ಬಿಜೆಪಿಯಲ್ಲೇ ಮುಂದುವರಿಯಲಿದ್ದಾರೆ. ಕರಡಿ ಸಂಗಣ್ಣ ಅವರಿಗೆ ಟಿಕೆಟ್ ನಿರಾಕರಿಸಿದ್ದರಿಂದ ಅಸಮಾಧಾನಗೊಂಡಿದ್ದ ಅವರ ಬೆಂಬಲಿಗರು ಕೊಪ್ಪಳ ಬಿಜೆಪಿ ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಅವರ ಹಿಂಬಾಲಕರು ಶಕ್ತಿ ಪ್ರದರ್ಶನ ಮಾಡಲು ದೊಡ್ಡ ಕಾರ್ಯಕ್ರಮವನ್ನೂ ಆಯೋಜಿಸಿದ್ದರು.

ಈ ಎಲ್ಲಾ ಬೆಳವಣಿಗೆಗಳ ನಂತರ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಂಗಣ್ಣ ಬಿಜೆಪಿ ಅಭ್ಯರ್ಥಿ ಬಸವರಾಜ ಕ್ಯಾವಟರ್‌ಗೆ ಬೆಂಬಲ ನೀಡುವುದಾಗಿ ಘೋಷಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!