ಯಶಸ್ವಿ ಜೈಸ್ವಾಲ್ ಅಜೇಯ 179 ರನ್: ದಿನದಾಟದಂತ್ಯಕ್ಕೆ ಟೀಮ್ ಇಂಡಿಯಾ 336/6

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಡಗೈ ಆರಂಭಿಕ ಬ್ಯಾಟ್ಸ್‌ಮನ್ ಯಶಸ್ವಿ ಜೈಸ್ವಾಲ್ ಅಜೇಯ 179 ರನ್ ಗಳ ಆಟ ಟೀಮ್ ಇಂಡಿಯಾಕ್ಕೆ ಆಸರೆಯಾಗಿದ್ದು, ಮೊದಲ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 336 ರನ್ ಕಲೆಹಾಕಿದೆ.

ವಿಶಾಖಪಟ್ಟಣಂನ ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಪರ ಆರಂಭಿಕ ಯಶಸ್ವಿ ಜೈಸ್ವಾಲ್ 257 ಎಸೆತಗಳಲ್ಲಿ 17 ಬೌಂಡರಿ ಹಾಗೂ 5 ಸಿಕ್ಸರ್‌ಗಳ ನೆರವಿನಿಂದ 179 ರನ್ ಗಳಿಸಿ ಅಜೇಯರಾಗುಳಿದಿದ್ದಾರೆ. ಆದರೆ ತಂಡದ ಟಾಪ್ ಆರ್ಡರ್ ಈ ಪಂದ್ಯದಲ್ಲೂ ಕೈಕೊಟ್ಟಿತು.

ಜೈಸ್ವಾಲ್ ಹೊರತುಪಡಿಸಿ ತಂಡದ ಇತರ ಬ್ಯಾಟ್ಸ್‌ಮನ್‌ಗಳು ಉತ್ತಮ ಆರಂಭ ಪಡೆದ ನಂತರವೂ ದೊಡ್ಡ ಇನ್ನಿಂಗ್ಸ್ ಆಡುವಲ್ಲಿ ವಿಫಲರಾದರು. ಈ ಸರಣಿಯಲ್ಲಿ ರನ್ ಬರ ಎದುರಿಸುತ್ತಿರುವ ನಾಯಕ ರೋಹಿತ್ ಶರ್ಮಾ 14 ರನ್ ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬಂದ ಶುಭ್ಮನ್ ಗಿಲ್ ಕೂಡ 34 ರನ್​ಗಳಿಗೆ ಸುಸ್ತಾದರು. ಶ್ರೇಯಸ್ ಅಯ್ಯರ್ ಕೂಡ 27 ರನ್ ಗಳಿಸಿ, 30ಕ್ಕಿಂತ ಕಡಿಮೆ ರನ್ ಕಲೆಹಾಕುವ ತಮ್ಮ ಎಂದಿನ ಸಂಪ್ರದಾಯವನ್ನು ಮುಂದುವರೆಸಿದರು.

ಆದರೆ ಚೊಚ್ಚಲ ಟೆಸ್ಟ್ ಪಂದ್ಯವನ್ನು ಆಡುತ್ತಿರುವ ರಜತ್ ಪಾಟಿದಾರ್, ಶತಕ ವೀರ ಜೈಸ್ವಾಲ್​ಗೆ ಉತ್ತಮ ಸಾಥ್ ನೀಡಿದಲ್ಲದೆ, 32 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿದರು. ನಂತರ ಬಂದ ಅಕ್ಷರ್ ಪಟೇಲ್ 27 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ವಿಕೆಟ್ ಕೀಪರ್ ಬ್ಯಾಟ್ಸನ್ ಶ್ರೀಕರ್ ಭರತ್ ಬೇಡದ ಶಾಟ್ ಆಡಿ 17 ರನ್​ಗಳಿಗೆ ಪೆವಿಲಿಯನ್ ಸೇರಿಕೊಂಡರು. ಆದರೆ ತಂಡದ ಪರ ಏಕಾಂಗಿ ಹೋರಾಟ ನಡೆಸುತ್ತಿರುವ ಜೈಸ್ವಾಲ್ ದ್ವಿಶತಕದಂಚಿನಲ್ಲಿದ್ದು, 179 ರನ್ ಕಲೆಹಾಕುವ ಮೂಲಕ 172 ರನ್​ಗಳ ತಮ್ಮ ಹಳೆಯ ದಾಖಲೆಯನ್ನೂ ಸಹ ಮುರಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!