ಇಸ್ರೋದಿಂದ ಭೂ ವೀಕ್ಷಣಾ ಉಪಗ್ರಹ ಸೇರಿ ಮೂರು ಉಪಗ್ರಹಗಳ ಯಶಸ್ವಿ ಉಡಾವಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹತ್ವಾಕಾಂಕ್ಷೆಯ ಭೂ ಸರ್ವೇಕ್ಷಣಾ ಉಪಗ್ರಹ ಇಒಎಸ್-04 ಸೇರಿದಂತೆ ಮತ್ತೆರಡು ಉಪಗ್ರಹಗಳಿದ್ದ ಪಿಎಸ್‌ಎಲ್‌ವಿ ಸಿ-52 ರಾಕೆಟ್‌ನ್ನು ಇಂದು ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ.

ಬೆಳಗ್ಗೆ5:59 ಕ್ಕೆ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಈ ರಾಕೆಟ್ ನಭಕ್ಕೆ ಚಿಮ್ಮಿದೆ. ಈ ಉಡಾಯನದ ೨೫ ಗಂಟೆಗಳ ಕೌಂಟ್‌ಡೌನ್ ಮುಗಿಯುತ್ತಿದ್ದಂತೆ ನಿಗದಿಯಂತೆ ರಾಕೆಟ್ ಪಿಎಸ್‌ಎಲ್‌ವಿ ಬಾಹ್ಯಾಕಾಶದತ್ತ ಪ್ರಯಾಣ ನಡೆಸಿತು.

ಉಪಗ್ರಹ ಇಒಎಸ್-04 10 ವರ್ಷಗಳಷ್ಟು ಬಾಳ್ವಿಕೆ ಬರಲಿದೆ. ಭೂ ವೀಕ್ಷಣಾ ಉಪಗ್ರಹ ಕೃಷಿ, ಅರಣ್ಯ ಮತ್ತು ತೋಟಗಳು, ಮಣ್ಣಿನ ತೇವಾಂಶ ಮತ್ತು ಜಲವಿಜ್ಞಾನ ಮತ್ತು ಪ್ರವಾಹ ಮ್ಯಾಪಿಂಗ್‌ನಂತಹ ಅಪ್ಲಿಕೇಷನ್‌ಗಳಿಗಾಗಿ ಕೆಲಸ ಮಾಡಲಿದೆ.

ಎಂಥದ್ದೇ ಪ್ರತಿಕೂಲ ಹವಾಮಾನ ಪರಿಸ್ಥಿತಿಯಲ್ಲಿಯೂ ಉತ್ತಮ ಗುಣಮಟ್ಟದ ಚಿತ್ರಗಳನ್ನು ಭೂಮಿಗೆ ಕಳಿಸುವಂತೆ ವಿನ್ಯಾಸ ಮಾಡಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!