Friday, August 19, 2022

Latest Posts

ಯಶಸ್ವಿಗೊಂಡ ಸಾಮೂಹಿಕ ಕನ್ನಡ ಗಾಯನ ಕಾರ್ಯಕ್ರಮ

ದಿಗಂತ ವರದಿ ಯಾದಗಿರಿ :

ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ “ಕನ್ನಡಕ್ಕಾಗಿ ನಾವು” ಅಭಿಯಾನದ ಭಾಗವಾಗಿ ಇಲ್ಲಿನ ಜಿಲ್ಲಾಡಳಿತ ಭವನದ ಆಡಿಟೊರಿಯಂನಲ್ಲಿ ಗುರುವಾರ ಆಯೋಜಿಸಿದ್ದ ಮಾತಾಡ್ ಮಾತಾಡ್ ಕನ್ನಡ ಸಾಮೂಹಿಕ ಕನ್ನಡ ಗಾಯನ ಕಾರ್ಯಕ್ರಮದಲ್ಲಿ ಕುವೆಂಪು ಅವರ “ಬಾರಿಸು ಕನ್ನಡ ಡಿಂಡಿಮವ” ನಿಸಾರ್ ಅಹಮ್ಮದ್ ಅವರ “ಜೋಗದ ಸಿರಿ ಬೆಳಕಿನಲ್ಲಿ” ಹಾಗೂ ಹಂಸಲೇಖರವರ ಸಾಹಿತ್ಯದ ಹುಟ್ಟಿದರೇ “ಕನ್ನಡ ನಾಡಲ್ಲಿ ಹುಟ್ಟಬೇಕು” ಗೀತೆಗಳನ್ನು ಹಾಡುವುದರ ಮೂಲಕ ಲಕ್ಷ ಕಂಠ ಗೀತಗಾಯನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲಾಯಿತು.
ಕನ್ನಡಾಭಿಮಾನವನ್ನು ಬಿಂಬಿಸುವ ದಾಖಲೆಯ ಈ ಕಾರ್ಯಕ್ರಮದಕ್ಕೆ ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಚಾಲನೆ ನೀಡಿದರು. ಜಿಲ್ಲೆಯ ಕನ್ನಡಪರ ಹೋರಾಟಗಾರರು, ನೂರಾರು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಕನ್ನಡ ಪ್ರೇಮವನ್ನು ಮರೆದರು.
ಕನ್ನಡದಲ್ಲಿಯೇ ಮಾತನಾಡಲೂ ಪಣ
ಇದೇ ಸಂದರ್ಭದಲ್ಲಿ ಕನ್ನಡಿಗರೆಲ್ಲರೂ ಒಟ್ಟಾಗಿ ಕನ್ನಡ ನಾಡಿನ ಜವಾಬ್ದಾರಿಯುತ ಪ್ರಜೆಯಾಗಿ ಕನ್ನಡದಲ್ಲೇ ಮಾತನಾಡುವುದು, ಬರೆಯುವುದು, ಕನ್ನಡದಲ್ಲೇ ನಿತ್ಯ ವ್ಯವಹರಿಸುವ ಪ್ರತಿಜ್ಞಾ ವಿಧಿಯನ್ನು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಆರ್ ಅವರು ಭೋದಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಶಿಲ್ಪಾ ಶರ್ಮಾ, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಹಾಯಕ ಆಯುಕ್ತ ಪ್ರಶಾಂತ ಹನಗುಂಡಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಅಮರಯ್ಯಸ್ವಾಮಿ ಜಾಲಿಬೆಂಚಿ, ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯ ಶರಣು ಬಿ ಗದ್ದುಗೆ, ಭೀಮರಾಯ ಲಿಂಗೇರಿ, ಪ್ರಕಾಶ ಅಂಗಡಿ, ಆನಂದ ಮಧುಸೂದನ ಸೌದಿ, ಡಿಡಿಪಿಐ ಶಾಂತಗೌಡ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೊಟ್ರೇಶ್ ಮರಬನಳ್ಳಿ ಮತ್ತಿತರರು ಇದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!