ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಫೈನಲ್ನಲ್ಲಿ ಗೆದ್ದ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಮೊಣಕಾಲು ನೋವಿಗೆ ಒಳಗಾಗಿದ್ದರು. ಇದೀಗ ಯಶಸ್ವಿಯಾಗಿ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ.
ಧೋನಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ಹೋಗಿ ಮೇ 31 ರಂದು ಮೊಣಕಾಲಿನ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದರು. ಇದೀಗ ಒಂದು ದಿನದ ನಂತರ ಅಂದರೆ, ಜೂನ್ 1 ರ ಬೆಳಿಗ್ಗೆ ಧೋನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದು ವರದಿಯಾಗಿದೆ.
ಆದರೆ ಈ ಶಸ್ತ್ರಚಿಕಿತ್ಸೆಗೂ ಮುನ್ನ ಧೋನಿಯ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದ್ದು, ಈ ಫೋಟೋದಲ್ಲಿ ಕಾರಿನಲ್ಲಿ ಕುಳಿತಿರುವ ಧೋನಿ ತಮ್ಮ ಕೈನಲ್ಲಿ ಭಗವದ್ಗೀತೆಯನ್ನು ಹಿಡಿದುಕೊಂಡು ಪೋಸ್ ನೀಡಿದ್ದಾರೆ.
ಸದ್ಯ ಮೊಣಕಾಲು ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಧೋನಿ ಇದರಿಂದ ಚೇತರಿಸಿಕೊಳ್ಳಲು ಕೆಲವು ತಿಂಗಳುಗಳ ಸಮಯ ತೆಗೆದುಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.