Tuesday, August 16, 2022

Latest Posts

ಕನ್ನಡಿಗ ಕೆ.ಎಲ್.‌ ರಾಹುಲ್‌ ಗೆ ಸರ್ಜರಿ ಯಶಸ್ವಿ : ಶೀಘ್ರವೇ ತಂಡಕ್ಕೆ ವಾಪಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಭಾರತದ ಕ್ರಿಕೆಟ್‌ ತಂಡದ ಆರಂಭಿಕ ಆಟಗಾರ ಕನ್ನಡಿಗ ಕೆ.ಎಲ್.ರಾಹುಲ್‌ ಅವರ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು ಅವರು ಶೀಘ್ರವೇ ತಂಡಕ್ಕೆ ವಾಪಸ್ಸಾಗುವ ಸಾಧ್ಯತೆಯಿದೆ.

ತೊಡೆಸಂದು ಗಾಯದಿಂದ ಬಳಲುತ್ತಿದ್ದ ಓಪ್ನರ್‌ ಆಟಗಾರ ಕೆ.ಎಲ್.‌ ರಾಹುಲ್‌ ಶಸ್ತ್ರಚಿಕಿತ್ಸೆಗಾಗಿ ಜರ್ಮನಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಪ್ರಸ್ತುತ ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಅವರೀಗ ಚೇತರಿಸಿಕೊಳ್ಳುತ್ತಿದ್ದಾರೆ. ಇದೇ ಕಾರಣದಿಂದ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ T20I ಸರಣಿಯಿಂದ ಹಾಗೂ ಇಂಗ್ಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದಾರೆ.

ತಮ್ಮ ಚೇತರಿಕೆಯ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿರುವ ಕ್ರಿಕೆಟ್‌ ಆಟಗಾರ ಕೆ.ಎಲ್.‌ರಾಹುಲ್‌ “ಎಲ್ಲರಿಗೂ ನಮಸ್ಕಾರ. ಇದು ಒಂದೆರಡು ವಾರಗಳ ಕಾಲ ಕಠಿಣವಾಗಿತ್ತು ಆದರೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ನಾನು ಚೇತರಿಸಿಕೊಳ್ಳುತ್ತಿದ್ದೇನೆ. ನನ್ನ ಚೇತರಿಕೆಯ ಹಾದಿ ಪ್ರಾರಂಭವಾಗಿದೆ. ನಿಮ್ಮ ಸಂದೇಶಗಳು ಮತ್ತು ಪ್ರಾರ್ಥನೆಗಳಿಗೆ ಧನ್ಯವಾದಗಳು. ಶೀಘ್ರದಲ್ಲೇ ನಿಮ್ಮನ್ನು ಭೇಟಿ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss