ಜಗತ್ತಿನ ಅತಿ ಎತ್ತರದ ರೈಲ್ವೆ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಚೆನಾಬ್‌ ನದಿ ಮೇಲೆ ನಿರ್ಮಿಸಿರುವ ಜಗತ್ತಿನ ಅತಿ ಎತ್ತರದ ಉಕ್ಕಿನ ಕಮಾನು ರೈಲ್ವೆ ಸೇತುವೆಯಲ್ಲಿ ರೈಲ್ವೆ ಇಲಾಖೆ ಉನ್ನತ ಅಧಿಕಾರಿಗಳು ಹಳಿ ಸೇರಿದಂತೆ ಇತರ ತಾಂತ್ರಿಕ ಕೆಲಸಗಳನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಚೆನಾಬ್ ಸೇತುವೆ ಮೇಲೆ ಪ್ರಾಯೋಗಿಕ ರೈಲು ಸಂಚಾರ ಯಶಸ್ವಿಯಾಗಿದೆ.

ಜಮ್ಮುವಿನ ರಿಯಾಸಿ ಜಿಲ್ಲೆಯಿಂದ ಕಾಶ್ಮೀರಕ್ಕೆ ರೈಲು ಮಾರ್ಗದ ಮೂಲಕ ಸಂಪರ್ಕ ಕಲ್ಪಿಸುವ ಸಂಗಲ್ದನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ, ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ.

ಈ ಕುರಿತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್(ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಂಗಲ್ದನ್‌ನಿಂದ ರಿಯಾಸಿ ನಡುವಿನ ಮೊದಲ ಪ್ರಾಯೋಗಿಕ ರೈಲು ಸಂಚಾರ ಚೆನಾಬ್ ಸೇತುವೆಯನ್ನು ದಾಟುವುದರೊಂದಿಗೆ ಯಶಸ್ವಿಯಾಗಿ ಸಂಚರಿಸಿದೆ. USBRL(Udhampur-Srinagar-Baramulla Rail link) ಗಾಗಿ ಎಲ್ಲಾ ನಿರ್ಮಾಣ ಕಾರ್ಯಗಳು ಬಹುತೇಕ ಪೂರ್ಣಗೊಂಡಿವೆ. ಆದರೆ, ಸುರಂಗ ಸಂಖ್ಯೆ 1 ಮಾತ್ರ ಭಾಗಶಃ ಅಪೂರ್ಣವಾಗಿ ಉಳಿದಿದೆ ಎಂದು ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

https://x.com/AshwiniVaishnaw/status/1802345449950704078?ref_src=twsrc%5Etfw%7Ctwcamp%5Etweetembed%7Ctwterm%5E1802339443778687468%7Ctwgr%5E6f56b958e89b86789a8cef010a2cc2e782c9333a%7Ctwcon%5Es1_&ref_url=https%3A%2F%2Ftv9kannada.com%2Fnational%2Ftrial-train-operation-on-worlds-highest-chenab-bridge-successful-national-news-krn-851174.html

ಕಳೆದ ತಿಂಗಳು ಉತ್ತರ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಶೋಭನ್ ಚೌಧುರಿ ಅವರು ಮೋಟಾರು ಟ್ರಾಲಿ ಮೂಲಕ ಸಂಗಲ್ದಾನ್ ನಿಲ್ದಾಣದವರೆಗಿನ ಚೆನಾಬ್ ಸೇತುವೆಯನ್ನು ಪರಿಶೀಲಿಸಿದ್ದರು. ಚೆನಾಬ್‌ನ ಮೇಲಿನ ವಿಶ್ವದ ಅತಿ ಎತ್ತರದ ರೈಲು ಸೇತುವೆ ಇದಾಗಿದ್ದು, ಪ್ಯಾರಿಸ್‌ನ ಐಕಾನಿಕ್ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರದಲ್ಲಿರುವ, ನದಿಪಾತ್ರದ ಮೇಲೆ 359 ಮೀಟರ್‌ಗಳಷ್ಟು ಎತ್ತರದಲ್ಲಿರುವ 1.3 ಕಿಮೀ ಉದ್ದದ ರೈಲು ಸೇತುವೆ. ಇನ್ನು ಉಧಮ್‌ಪುರ-ಶ್ರೀನಗರ- ಬಾರಾಮುಲ್ಲಾ ರೈಲು ಸಂಪರ್ಕವನ್ನು ವರ್ಷಾಂತ್ಯದೊಳಗೆ ಪೂರ್ಣಗೊಳಿಸುವ ನಿರೀಕ್ಷೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!