ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಟ್ಟುಹಬ್ಬದ ದಿನವೇ ವಿಧ್ಯಾರ್ಥಿನಿಯೊಬ್ಬಳು ಅಪಘಾತದಲ್ಲಿ ಮೃತಪಟ್ಟಿದ್ದಾಳೆ.
ಚಿಕ್ಕಬಳ್ಳಾಪುರ ತಾಲೂಕಿನ ಹೊನ್ನೇನಹಳ್ಳಿ ಗ್ರಾಮದ ಬಿಕಾಂ ವಿದ್ಯಾರ್ಥಿನಿ ರಕ್ಷಿತಾ ಮೃತರು. ರಕ್ಷಿತಾ ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಬೆಂಗಳೂರಿನಿಂದ ತಮ್ಮ ಮನೆಗೆ ಬರುವ ವೇಳೆ ಕಾರ್ ಡಿವೈಡರ್ಗೆ ಡಿಕ್ಕಿಯಾಗಿದೆ.
ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.