ಕ್ರಿಕೆಟ್‌ ಇತಿಹಾಸದಲ್ಲೇ ಇಂಥ ಘಟನೆ ನಡೆದಿಲ್ಲ, ತಪ್ಪು ಯಾರೇ ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆ: ಜಿ ಪರಮೇಶ್ವರ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆ ಕ್ರಿಕೆಟ್ ಇತಿಹಾಸದಲ್ಲೇ ಆಗಿರಲಿಲ್ಲ ಎಂದು ಗೃಹಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.

ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟ ಘಟನೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೊದಲು ಸಾವನ್ನಪ್ಪಿದವರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ದು:ಖ ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ.

ಬುಧವಾರ ಸಿಎಂ ಎಲ್ಲಾ ಮಾಹಿತಿ ಪಡೆದು ಮಾತನಾಡಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ನಾವು ಕ್ರಮ ತೆಗೆದುಕೊಳ್ಳುತ್ತೇವೆ. ಈಗ ಯಾವುದೇ ವಿವರಣೆ ಕೊಡಲ್ಲ. ಮ್ಯಾಜಿಸ್ಟ್ರೇಟ್ ತನಿಖೆ ಆದ ನಂತರ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!