ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದ ದಾಳಿಯಲ್ಲಿ ಆರೋಪಿಯನ್ನು ಗುಜರಾತ್‌ನ ನಿವಾಸಿ ಸಕಾರಿಯಾ ರಾಜೇಶ್‌ಭಾಯ್ ಖಿಮ್ಜಿಭಾಯ್ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೊಲೆ ಯತ್ನ ಪ್ರಕರಣ ದಾಖಲಿಸಿದ್ದಾರೆ.
ಇದೀಗ ಸಿಎಂ ರೇಖಾ ಗುಪ್ತಾ ಅವರು ದಾಳಿಯ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದು, ‘ಈ ದಾಳಿ ಕೇವಲ ನನ್ನ ಮೇಲೆ ಮಾತ್ರವಲ್ಲ, ದೆಹಲಿಯ ಜನರ ಕಲ್ಯಾಣಕ್ಕಾಗಿ ನಾವು ಹೊಂದಿರುವ ಸಂಕಲ್ಪದ ಮೇಲಿನ ಹೇಡಿತನದ ಪ್ರಯತ್ನವಾಗಿದೆ. ಆರಂಭದಲ್ಲಿ ಆಘಾತಕ್ಕೊಳಗಾದರೂ, ಈಗ ನಾನು ಉತ್ತಮವಾಗಿದ್ದೇನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ. ಅವರು ತಮ್ಮ ಹಿತೈಷಿಗಳಿಗೆ ಭೇಟಿಯಾಗಲು ಚಿಂತಿಸದಂತೆ ವಿನಂತಿಸಿದ್ದಾರೆ.
ಇಂತಹ ದಾಳಿಗಳು ನನ್ನ ಚೈತನ್ಯವನ್ನು ಎಂದಿಗೂ ಕಸಿಯಲು ಸಾಧ್ಯವಿಲ್ಲ. ಈಗ ನಾನು ಹಿಂದೆಂದಿಗಿಂತಲೂ ಹೆಚ್ಚು ಶಕ್ತಿಯಿಂದ ಜನರೊಂದಿಗೆ ಕೆಲಸ ಮಾಡುತ್ತೇನೆ. ಸಾರ್ವಜನಿಕ ಸಮಸ್ಯೆಗಳ ಪರಿಹಾರವು ಮೊದಲಿನಂತೆ ಗಂಭೀರತೆಯಿಂದ ಮುಂದುವರಿಯುತ್ತದೆ. ನಿಮ್ಮ ಪ್ರೀತಿ, ಆಶೀರ್ವಾದ ಮತ್ತು ಬೆಂಬಲಕ್ಕೆ ಕೃತಜ್ಞೆ ಎಂದು ಸಿಎಂ ರೇಖಾ ಗುಪ್ತಾ ಹೇಳಿದ್ದಾರೆ.
ಪೊಲೀಸರ ಪ್ರಕಾರ, ಸಿಎಂ ನಿವಾಸದ ಕಡೆಗೆ ದಾಳಿ ನಡೆಸಲು ಆರೋಪಿ ರೆಕ್ಸಿಂಗ್ ಮಾಡುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ವೀಡಿಯೊದಲ್ಲಿ ಆತ ಸಿಎಂ ನಿವಾಸದತ್ತ ಹೋಗಿ ದಾಳಿಗೆ ಯತ್ನಿಸುತ್ತಿರುವುದು ಕಂಡುಬಂದಿದೆ.