ಇದೆಂಥಾ ದುರಾದೃಷ್ಟ, ದೇಗುಲದ ಗೇಟ್‌ ಮುರಿದು ಬಿದ್ದು ಬಾಲಕ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಂಜನಕೆರೆ ಗ್ರಾಮದಲ್ಲಿ ದೇಗುಲದ ಗೇಟ್‌ ಬಿದ್ದು ಬಾಲಕ ಮೃತಪಟ್ಟಿದ್ದಾನೆ.

ಕಾರ್ತಿಕ ಸೋಮವಾರದ ಹಿನ್ನೆಲೆ ಹುಂಜನಕೆರೆಯ ಚನ್ನಕೇಶವ ದೇಗುಲಕ್ಕೆ ಮಕ್ಕಳು ಕುಟುಂಬದವರ ಜೊತೆ ತೆರಳಿದ್ದ. ಈ ವೇಳೆ ದೇವಸ್ಥಾನದ ಗೇಟ್‌ ಬಾಲಕನ ಮೇಲೆ ಬಿದ್ದಿದೆ.

ತಕ್ಷಣ ಜಿಷ್ಣುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಲಕಾರಿಯಾಗದೆ ಮಗು ಮೃತಪಟ್ಟಿದೆ. ಘಟನೆ ಸಂಬಂಧ ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಜರಾಯಿ ಇಲಾಖೆ ವಿರುದ್ಧ ಪೋಷಕರು, ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ದೇಗುಲ ಮುಜರಾಯಿ ಇಲಾಖೆಗೆ ಸೇರಿದ್ದು, ಗೇಟ್ ಮುರಿದು ಬಹಳ ದಿನಗಳಾದ್ರೂ ದುರಸ್ಥಿ ಮಾಡದೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!