ನಾಗರಿಕರ ಮೇಲೆ ಭೀಕರ ದಾಳಿ ಮಾಡಿದ ಸುಡಾನ್‌ ಅರೆಸೇನಾ ಪಡೆ, 80 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮಧ್ಯ ಸುಡಾನ್‍ನ ಸಿನ್ನಾರ್ ರಾಜ್ಯದ ಹಳ್ಳಿಯೊಂದರ ಮೇಲೆ ಅರೆಸೇನಾ ಪಡೆಗಳು ಭೀಕರ ದಾಳಿ ನಡೆಸಿವೆ.

ಈ ದಾಳಿಯಲ್ಲಿ ಕನಿಷ್ಠ 80 ಜನರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಐದು ದಿನಗಳ ಮುತ್ತಿಗೆಯ ನಂತರ ಸಿನ್ನಾರ್ ರಾಜ್ಯದ ಜಲ್ಕ್ನಿ ಗ್ರಾಮದ ಮೇಲೆ ಆರ್‌ಎಸ್‌ಎಫ್ ದಾಳಿ ನಡೆಸಿದೆ.

ಗ್ರಾಮದಿಂದ ಯುವತಿಯರನ್ನು ಅಪಹರಿಸಲು ಆರ್‌ಎಸ್‌ಎಫ್ ಪ್ರಯತ್ನಿಸಿತು. ಇದಕ್ಕೆ ನಿವಾಸಿಗಳು ವಿರೋಧಿಸಿದಾಗ ಅವರ ಮೇಲೆ ಈ ದಾಳಿ ನಡೆಸಲಾಯಿತು. ಪರಿಣಾಮ ಕನಿಷ್ಠ 80 ಜನ ಸಾವಿಗೀಡಾಗಿದ್ದಾರೆ ಎಂದು ಸಿನ್ನಾರ್ ಯೂತ್ ಗ್ಯಾದರಿಂಗ್ ತಿಳಿಸಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!